ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪದ್ಮ ಪ್ರಶಸ್ತಿ ಪುರಸ್ಕೃತರಾದ, ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

प्रविष्टि तिथि: 01 JAN 2025 10:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪದ್ಮ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:

"ಪದ್ಮ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಸ್ಯಶಾಸ್ತ್ರದಲ್ಲಿ ಅವರು ನಡೆಸಿದ ಶ್ರೀಮಂತ ಕಾರ್ಯವು ಮುಂಬರುವ ಸಸ್ಯಶಾಸ್ತ್ರಜ್ಞರು ಮತ್ತು ಸಂಶೋಧಕರರಿಗೆ ಮಾರ್ಗದರ್ಶಿಯಾಗಿ ಮುಂದುವರೆಯುತ್ತದೆ. ಅವರು ಕೇರಳದ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಬಹಳ ಉತ್ಸಾಹ ಹೊಂದಿದ್ದರು. ಈ ದುಃಖದ ಸಮಯದಲ್ಲಿ ಭಗವಂತ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ" ಎಂದು ಬರೆದಿದ್ದಾರೆ.

 

 

*****


(रिलीज़ आईडी: 2089565) आगंतुक पटल : 124
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam