ರಾಷ್ಟ್ರಪತಿಗಳ ಕಾರ್ಯಾಲಯ
ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ
Posted On:
02 JAN 2025 8:08PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಜನವರಿ 3, 2025) ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಕರ್ನಾಟಕದಲ್ಲಿ ತಮ್ಮ ದಿನದ ವಾಸ್ತವ್ಯದ ಸಂದರ್ಭದಲ್ಲಿ, ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯ ಸ್ಮರಣಾರ್ಥವನ್ನು ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಆನಂತರ, ಅವರು ಬೆಳಗಾವಿಯಲ್ಲಿ "ಕೆ.ಎಲ್.ಇ. ಕ್ಯಾನ್ಸರ್ ಆಸ್ಪತ್ರೆ"ಯನ್ನು ಉದ್ಘಾಟಿಸಲಿದ್ದಾರೆ. ಹಾಗೂ, ನಂತರ ಅವರು ದೆಹಲಿಗೆ ತೆರಳಲಿದ್ದಾರೆ.
*****
(Release ID: 2089706)
Visitor Counter : 79