ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 04 JAN 2025 12:46PM by PIB Bengaluru

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು.

ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ಡಾ. ರಾಜಗೋಪಾಲ ಚಿದಂಬರಂ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದ್ದರು. ಅವರನ್ನು ಇಡೀ ರಾಷ್ಟ್ರವು ಕೃತಜ್ಞತೆಯಿಂದ ಸ್ಮರಿಸುತ್ತದೆ ಮತ್ತು ಅವರ ಪ್ರಯತ್ನಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ" ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

 

 

*****


(Release ID: 2090194) Visitor Counter : 15