ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ರಾಜ್ಯದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ  ಶ್ರೀ ಯೋಗಿ ಆದಿತ್ಯನಾಥ್ ಅವರೊಂದಿಗೆ ನವದೆಹಲಿಯಲ್ಲಿ ಪರಿಶೀಲನಾ ಸಭೆ ನಡೆಸಿದರು


ಮಾರ್ಚ್ 31, 2025 ರೊಳಗೆ ಉತ್ತರ ಪ್ರದೇಶದ ಎಲ್ಲಾ ಏಳು ಕಮಿಷನರೇಟ್ಗಳಲ್ಲಿ ಮತ್ತು ಆದಷ್ಟು ಬೇಗ ಇಡೀ ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ 100% ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವುದು.

ಉತ್ತರ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ವಿಧಿವಿಜ್ಞಾನ  ಸಂಚಾರಿ ವ್ಯಾನ್ ಲಭ್ಯವಿರಬೇಕು: ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ

ಒಟ್ಟು ಶೂನ್ಯ ಎಫ್.ಐ.ಆರ್.ಗಳಲ್ಲಿ ಎಷ್ಟು ಎಫ್.ಐ.ಆರ್.ಗಳನ್ನು ಸಂಬಂಧಪಟ್ಟ ರಾಜ್ಯಗಳಿಗೆ ವರ್ಗಾಯಿಸಲಾಗಿದೆ ಎನ್ನುವುದನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಪ್ರತಿ 15 ದಿನಗಳಿಗೊಮ್ಮೆ ಹಾಗು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ವಾರಕ್ಕೊಮ್ಮೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಮೂರು ಹೊಸ ಕಾನೂನುಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸುತ್ತಾರೆ

Posted On: 07 JAN 2025 8:41PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೊಂದಿಗೆ ರಾಜ್ಯದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು. ಉತ್ತರ ಪ್ರದೇಶದ ಆರಕ್ಷಕ, ಕಾರಾಗೃಹಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ವಿದಿವಿಜ್ಞಾನಕ್ಕೆ  ಸಂಬಂಧಿಸಿದ ವಿವಿಧ ಹೊಸ ನಿಬಂಧನೆಗಳ ಅನುಷ್ಠಾನ ಮತ್ತು ಪ್ರಸ್ತುತ ಸ್ಥಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಕೇಂದ್ರ ಗೃಹ ಕಾರ್ಯದರ್ಶಿ, ಆರಕ್ಷಕ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿ.ಪಿ.ಆರ್&ಡಿ) ಮಹಾನಿರ್ದೇಶಕರು ಮತ್ತು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ (ಎನ್.ಸಿ.ಆರ್.ಬಿ) ಮಹಾನಿರ್ದೇಶಕರು ಸೇರಿದಂತೆ ಗೃಹ ಸಚಿವಾಲಯ  ಮತ್ತು ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 

072A0534.JPG

ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಶಿಕ್ಷೆ ಕೇಂದ್ರಿತವಲ್ಲ, ಸಂತ್ರಸ್ತರನ್ನು ಕೇಂದ್ರೀಕರಿಸುತ್ತವೆ ಮತ್ತು ತ್ವರಿತ ನ್ಯಾಯವನ್ನು ಖಚಿತಪಡಿಸುವುದು ಅವುಗಳ ಉದ್ದೇಶವಾಗಿದೆ ಎಂದು ಹೇಳಿದರು. ಫೆಬ್ರವರಿ ತಿಂಗಳಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಮತ್ತು ಆದಷ್ಟು ಬೇಗ ರಾಜ್ಯದಲ್ಲಿ ಈ ಕಾನೂನುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಗೃಹ ಸಚಿವರು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರಿಗೆ ಹೇಳಿದರು.

ಉತ್ತರ ಪ್ರದೇಶದಂತಹ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ಅನುಷ್ಠಾನವು ಇಡೀ ದೇಶದಾದ್ಯಂತ ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದು ಶ್ರೀ ಅಮಿತ್ ಶಾ ಹೇಳಿದರು. ಮಾರ್ಚ್ 31, 2025 ರೊಳಗೆ ಉತ್ತರ ಪ್ರದೇಶದ ಎಲ್ಲಾ ಏಳು ಕಮಿಷನರೇಟ್ಗಳಲ್ಲಿ ಮತ್ತು ಸಾಧ್ಯವಾದಷ್ಟು ಬೇಗ ಇಡೀ ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಶೇಕಡಾ 100 ರಷ್ಟು ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.

ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದ ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ವಿಧಿವಿಜ್ಞಾನ ಸಂಚಾರಿ ವ್ಯಾನ್ಗಳು ಲಭ್ಯವಿರಬೇಕು ಎಂದು ಹೇಳಿದರು. ವಿಧಿವಿಜ್ಞಾನ ತಂಡಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಬೇಕು - ಗಂಭೀರ, ಸಾಮಾನ್ಯ ಮತ್ತು ಅತ್ಯಂತ ಸಾಮಾನ್ಯ - ಇದರಿಂದ ಸಂಪನ್ಮೂಲಗಳು ಮತ್ತು ತಜ್ಞರನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಬಹುದು ಮತ್ತು ಗಂಭೀರ ಪ್ರಕರಣಗಳಿಗೆ ಆದ್ಯತೆ ನೀಡಬಹುದು ಎಂದು ಹೇಳಿದರು.

 0I9A0528.JPG

ಒಟ್ಟು ಶೂನ್ಯ ಎಫ್.ಐ.ಆರ್.ಗಳಲ್ಲಿ ಎಷ್ಟು ಎಫ್.ಐ.ಆರ್.ಗಳನ್ನು ಸಂಬಂಧಪಟ್ಟ ರಾಜ್ಯಗಳಿಗೆ ವರ್ಗಾಯಿಸಲಾಗಿದೆ ಎಂಬುದರ ಕುರಿತು ನಿಯಮಿತ ಮತ್ತು ನಿರಂತರ ಮೇಲ್ವಿಚಾರಣೆ ಇರಬೇಕು ಎಂದು ಶ್ರೀ ಅಮಿತ್ ಶಾ ಹೇಳಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಪ್ರತಿ 15 ದಿನಗಳಿಗೊಮ್ಮೆ ಮೂರು ಹೊಸ ಕಾನೂನುಗಳ ಅನುಷ್ಠಾನದ ಪ್ರಗತಿಯನ್ನು ಹಾಗು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಎಲ್ಲಾ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ವಾರಕ್ಕೊಮ್ಮೆ ಪರಿಶೀಲಿಸಬೇಕು ಎಂದು ಅವರು ಹೇಳಿದರು.

 

*****
 


(Release ID: 2091101) Visitor Counter : 13


Read this release in: English , Urdu , Hindi , Punjabi