ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

Posted On: 11 JAN 2025 9:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಶುಭ ಹಾರೈಸಿದ್ದಾರೆ. "ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ಪರಿಶ್ರಮದಿಂದ ನಿರ್ಮಿಸಲಾದ ಈ ದೇವಾಲಯವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆಯಾಗಿದೆ" ಎಂದು ಶ್ರೀ ಮೋದಿಯವರು ಹೇಳಿದ್ದಾರೆ.  

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ನನ್ನ ಅನೇಕ ಶುಭಾಶಯಗಳು. ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದಿಂದ ನಿರ್ಮಿಸಲಾದ ಈ ದೇವಾಲಯವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ದೊಡ್ಡ ಉದಾಹರಣೆಯಾಗಿದೆ. ಈ ದೈವಿಕ-ಭವ್ಯವಾದ ರಾಮ ಮಂದಿರವು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ದೊಡ್ಡ ಸ್ಫೂರ್ತಿಯಾಗಲಿದೆ ಎಂದು ನಾನು ಆಶಿಸುತ್ತೇನೆ" ಎಂದು ಹೇಳಿದ್ದಾರೆ.

 

 

*****


(Release ID: 2092046) Visitor Counter : 21