ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

प्रविष्टि तिथि: 12 JAN 2025 10:18AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಹೊತ್ತಿಸುತ್ತಲೇ ಇದ್ದಾರೆ. ಬಲವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಅವರ ದೃಷ್ಟಿಕೋನವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ,’’ ಎಂದು ಹೇಳಿದ್ದಾರೆ.

 

 

*****


(रिलीज़ आईडी: 2092310) आगंतुक पटल : 59
इस विज्ञप्ति को इन भाषाओं में पढ़ें: Punjabi , English , Urdu , हिन्दी , Marathi , Assamese , Bengali-TR , Manipuri , Bengali , Gujarati , Odia , Tamil , Telugu , Malayalam