ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ 


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

Posted On: 22 JAN 2025 2:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ. 

“ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದಕ್ಕೆ ತೀವ್ರ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿದೆ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.

ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi’’

 

 

*****


(Release ID: 2095078) Visitor Counter : 18