ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 24 JAN 2025 8:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:

"ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ” ಎಂದು ಹೇಳಿದ್ದಾರೆ.

 

 

*****


(Release ID: 2095781) Visitor Counter : 11