ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
Posted On:
26 JAN 2025 8:30AM by PIB Bengaluru
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲಾ ಮಹಾನ್ ಮಹಿಳೆಯರು ಮತ್ತು ಪುರುಷರಿಗೆ ನಾವು ನಮಿಸುತ್ತೇವೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಬಲವಾದ ಮತ್ತು ಸಮೃದ್ಧ ಭಾರತದತ್ತ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.
"ನಿಮಗೆ ಗಣರಾಜ್ಯೋತ್ಸವದ ಶುಭಾಶಯಗಳು!
ಇಂದು ನಾವು ನಮ್ಮ ಭವ್ಯ ಗಣರಾಜ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ, ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಅಭಿವೃದ್ಧಿಯ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯನ್ನು ಆಧರಿಸಿದೆ ಎಂದು ಖಚಿತಪಡಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ನಾವು ನಮಸ್ಕರಿಸುತ್ತೇವೆ. ಈ ರಾಷ್ಟ್ರೀಯ ಹಬ್ಬವು ನಮ್ಮ ಸಂವಿಧಾನದ ಮೌಲ್ಯಗಳನ್ನು ಕಾಪಾಡಲಿ ಮತ್ತು ಬಲವಾದ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ,” ಎಂದು ಹೇಳಿದ್ದಾರೆ.
*****
(Release ID: 2096401)
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali-TR
,
Bengali
,
Punjabi
,
Gujarati
,
Odia
,
Tamil
,
Telugu
,
Malayalam