ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮಾ ಗಾಂಧಿ ಅವರ ಪುಣ್ಯತಿಥಿ ನಿಮಿತ್ತ ಪ್ರಧಾನಮಂತ್ರಿ ಗೌರವ ನಮನ
ಪ್ರಕಟಣಾ ದಿನಾಂಕ:
30 JAN 2025 9:06AM by PIB Bengaluru
ಮಹಾತ್ಮ ಗಾಂಧಿಯವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಶ್ರೀ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿದರು.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಪೂಜ್ಯ ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ನಮನಗಳು. ಅವರ ಆದರ್ಶಗಳು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತವೆ. ನಮ್ಮ ದೇಶಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ ಹಾಗೂ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುತ್ತೇನೆ."
*****
(ಪ್ರಕಟಣೆ ಐ.ಡಿ.: 2097565)
ವಿಸಿಟರ್ ಕೌಂಟರ್ : 74
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam