ಹಣಕಾಸು ಸಚಿವಾಲಯ
azadi ka amrit mahotsav

2025-26ರ ಕೇಂದ್ರ ಬಜೆಟ್, ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮವನ್ನು ಪ್ರಮುಖ ವಲಯವೆಂದು ಗುರುತಿಸಿದೆ


ದೇಶದ ಟಾಪ್ 50 ಪ್ರವಾಸಿ ತಾಣಗಳನ್ನು ರಾಜ್ಯಗಳ ಸಹಭಾಗಿತ್ವದಲ್ಲಿ, ಸ್ಪರ್ಧಾತ್ಮಕ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು

ವೈದ್ಯಕೀಯ ಪ್ರವಾಸೋದ್ಯಮ ಮತ್ತು 'ಹೀಲ್ ಇನ್ ಇಂಡಿಯಾ' ಕಾರ್ಯಕ್ರಮವನ್ನು ಖಾಸಗಿ ಸಹಭಾಗಿತ್ವದಲ್ಲಿ ಉತ್ತೇಜಿಸಲಾಗುವುದು

1 ಕೋಟಿಗೂ ಹೆಚ್ಚು ಹಸ್ತಪ್ರತಿಗಳನ್ನು ದಾಖಲಿಸಿ ಸಂರಕ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು

Posted On: 01 FEB 2025 1:02PM by PIB Bengaluru

2025-26ರ ಕೇಂದ್ರ ಬಜೆಟ್ ಪ್ರವಾಸೋದ್ಯಮವನ್ನು ಉದ್ಯೋಗ ಆಧಾರಿತ ಬೆಳವಣಿಗೆಗೆ ಒಂದು ವಲಯವೆಂದು ಗುರುತಿಸಿದೆ. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಉದ್ಯೋಗ ಆಧಾರಿತ ಬೆಳವಣಿಗೆಗೆ ಅನುಕೂಲವಾಗುವಂತೆ ಯುವಜನರಿಗೆ ತೀವ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸುವುದು, ಆತಿಥ್ಯ ನಿರ್ವಹಣೆ, ಹೋಂಸ್ಟೇಗಳಿಗೆ ಮುದ್ರಾ ಸಾಲಗಳು, ಪ್ರವಾಸಿ ತಾಣಗಳಿಗೆ ಪ್ರಯಾಣ ಮತ್ತು ಸಂಪರ್ಕದ ಸುಲಭತೆಯನ್ನು ಸುಧಾರಿಸುವುದು, ಸುವ್ಯವಸ್ಥಿತ ಇ-ವೀಸಾ ಸೌಲಭ್ಯಗಳನ್ನು ಪರಿಚಯಿಸುವುದು ಮತ್ತು ರಾಜ್ಯಗಳಿಗೆ ಕಾರ್ಯಕ್ಷಮತೆ-ಸಂಬಂಧಿತ ಪ್ರೋತ್ಸಾಹಕಗಳನ್ನು ನೀಡುವುದು ಮುಂತಾದ ಕ್ರಮಗಳನ್ನು ಒಳಗೊಂಡಿದೆ ಎಂದು ಹೇಳಿದರು.

ದೇಶದ ಅಗ್ರ 50 ಪ್ರವಾಸಿ ತಾಣಗಳನ್ನು ರಾಜ್ಯಗಳ ಸಹಭಾಗಿತ್ವದಲ್ಲಿ ಚಾಲೆಂಜ್ ಮೋಡ್ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು. ಹೋಟೆಲ್ ಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ನಿರ್ಮಿಸಲು ರಾಜ್ಯಗಳು ಭೂಮಿಯನ್ನು ಒದಗಿಸಬೇಕಾಗುತ್ತದೆ ಮತ್ತು ಆ ಸ್ಥಳಗಳಲ್ಲಿನ ಹೋಟೆಲ್ ಗಳನ್ನು ಮೂಲಸೌಕರ್ಯ HML ನಲ್ಲಿ ಸೇರಿಸಲಾಗುವುದು ಎಂದು ಬಜೆಟ್ ನಲ್ಲಿ ಸೇರಿಸಲಾಗಿದೆ. ಆಧ್ಯಾತ್ಮಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳಿಗೆ ಒತ್ತು ನೀಡಲಾಗುವುದು ಮತ್ತು ಭಗವಾನ್ ಬುದ್ಧನ ಜೀವನ ಮತ್ತು ಕಾಲಕ್ಕೆ ಸಂಬಂಧಿಸಿದ ಸ್ಥಳಗಳಿಗೆ ವಿಶೇಷ ಗಮನ ನೀಡಲಾಗುವುದು ಎಂದು ಸಚಿವರು ಹೇಳಿದರು. ವೈದ್ಯಕೀಯ ಪ್ರವಾಸೋದ್ಯಮ ಮತ್ತು 'ಹೀಲ್ ಇನ್ ಇಂಡಿಯಾ' ಕಾರ್ಯಕ್ರಮವನ್ನು ಖಾಸಗಿ ಸಹಭಾಗಿತ್ವದಲ್ಲಿ, ಸಾಮರ್ಥ್ಯ ವರ್ಧನೆ ಮತ್ತು ಸಲೀಸಾದ ವೀಸಾ ನಿಯಮಗಳೊಂದಿಗೆ ಉತ್ತೇಜಿಸಲಾಗುವುದು ಎಂದು ಶ್ರೀಮತಿ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ಹೇಳಿದರು.

ಜ್ಞಾನ ಭಾರತ್ ಮಿಷನ್

1 ಕೋಟಿಗೂ ಹೆಚ್ಚು ಹಸ್ತಪ್ರತಿಗಳನ್ನು ಒಳಗೊಳ್ಳಲು ಶೈಕ್ಷಣಿಕ ಸಂಸ್ಥೆಗಳು, ವಸ್ತುಸಂಗ್ರಹಾಲಯಗಳು, ಗ್ರಂಥಾಲಯಗಳು ಮತ್ತು ಖಾಸಗಿ ಸಂಗ್ರಹಕಾರರೊಂದಿಗೆ ನಮ್ಮ ಹಸ್ತಪ್ರತಿ ಪರಂಪರೆಯ ದಾಖಲಾತಿ ಮತ್ತು ಸಂರಕ್ಷಣೆಯನ್ನು ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ಜ್ಞಾನ ಹಂಚಿಕೆಗಾಗಿ ಸರ್ಕಾರವು ಭಾರತೀಯ ಜ್ಞಾನ ವ್ಯವಸ್ಥೆಗಳ ರಾಷ್ಟ್ರೀಯ ಡಿಜಿಟಲ್ ಭಂಡಾರವನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದರು.

 

*****
 


(Release ID: 2098538) Visitor Counter : 25