ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 04 FEB 2025 9:00AM by PIB Bengaluru

ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ‌ ಹೀಗೆ ಬರೆದಿದ್ದಾರೆ: 

"ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ನಮ್ಮ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯ ನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಿರಲಿ ಎಂದು  ಹಾರೈಸುತ್ತೇನೆ."

 

 

*****


(Release ID: 2099555) Visitor Counter : 23