ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೊರೆ ನಾಲ್ಕನೇ ಕರೀಮ್ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

Posted On: 05 FEB 2025 4:10PM by PIB Bengaluru

ದೊರೆ ನಾಲ್ಕನೇ ಕರೀಂ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ದೂರದೃಷ್ಟಿಯುಳ್ಳವರಾಗಿದ್ದರು ಎಂದು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿರವರ ಎಕ್ಸ್ ಪೋಸ್ಟ್ ಹೀಗಿದೆ: 

"ದೊರೆ ನಾಲ್ಕನೇ ಕರೀಮ್ ಅಗಾ ಖಾನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮ ಜೀವನ ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳು ಹಲವಾರು ಜನರಿಗೆ ಸ್ಫೂರ್ತಿ ನೀಡುತ್ತಲಿರುತ್ತದೆ. ಅವರೊಂದಿಗಿನ ಸಂವಾದವನ್ನು ನಾನು ಸದಾ ಸ್ಮರಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಪ್ರಪಂಚದಾದ್ಯಂತದ ಲಕ್ಷಾಂತರ ಅನುಯಾಯಿಗಳು ಮತ್ತು ಅಭಿಮಾನಿಗಳಿಗೆ ನನ್ನ ತೀವ್ರ ಸಂತಾಪಗಳು.”

 

 

*****


(Release ID: 2100071) Visitor Counter : 14