ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ

प्रविष्टि तिथि: 13 FEB 2025 11:39PM by PIB Bengaluru

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಶ್ರೀ ಮೈಕೆಲ್ ವಾಲ್ಟ್ಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತ-ಅಮೆರಿಕ ಸಮಗ್ರ ಜಾಗತಿಕ ತಂತ್ರಗಾರಿಕಾ ಪಾಲುದಾರಿಕೆಯನ್ನು ಇನ್ನಷ್ಟು ಆಳವಾಗಿಸುವ ಮಾರ್ಗಗಳ ಬಗ್ಗೆ  ಉಭಯರು ಚರ್ಚಿಸಿದರು. ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಮತ್ತು ಭಯೋತ್ಪಾದನೆ ನಿಗ್ರಹದ ವಿಷಯಗಳಿಗೆ ಒತ್ತು ನೀಡುತ್ತಾ ರಕ್ಷಣಾ ಕೈಗಾರಿಕಾ ಸಹಕಾರ ಮತ್ತು ನಾಗರಿಕ ಪರಮಾಣು ಶಕ್ತಿಯ ಜೊತೆಗೆ ಕಾರ್ಯತಂತ್ರದ ತಂತ್ರಜ್ಞಾನಗಳ ಬಗ್ಗೆ ಚರ್ಚೆ ಕೇಂದ್ರೀಕೃತವಾಗಿತ್ತು.

ಪರಸ್ಪರ ಹಿತಾಸಕ್ತಿಯ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದರು.

 

*****


(रिलीज़ आईडी: 2104909) आगंतुक पटल : 61
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam