ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಮಾತನಾಡಿದರು


ವಿಕಸಿತ ಭಾರತದ ಗುರಿಯತ್ತ ಸಾಗುವ ನಮ್ಮ ಸಂಕಲ್ಪ ಸ್ಪಷ್ಟವಾಗಿದೆ: ಪ್ರಧಾನಮಂತ್ರಿ

ರೈತರು ಸಮೃದ್ಧವಾಗಿರುವ ಮತ್ತು ಸಬಲರಾಗಿರುವ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ: ಪ್ರಧಾನಮಂತ್ರಿ

ನಾವು ಕೃಷಿಯನ್ನು ಅಭಿವೃದ್ಧಿಯ ಮೊದಲ ಎಂಜಿನ್ ಎಂದು ಪರಿಗಣಿಸಿದ್ದೇವೆ, ಇದು ರೈತರಿಗೆ ಹೆಮ್ಮೆಯ ಸ್ಥಾನ ನೀಡಿದೆ: ಪ್ರಧಾನಮಂತ್ರಿ

ನಾವು ಎರಡು ದೊಡ್ಡ ಗುರಿಗಳಾದ ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ನಮ್ಮ ಹಳ್ಳಿಗಳ ಸಮೃದ್ಧಿಗಾಗಿ  ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ: ಪ್ರಧಾನಮಂತ್ರಿ

ನಾವು ಬಜೆಟ್ ನಲ್ಲಿ 'ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ'ಯನ್ನು ಘೋಷಿಸಿದ್ದೇವೆ, ಅದರ ಅಡಿಯಲ್ಲಿ ದೇಶದಲ್ಲಿ ಕಡಿಮೆ ಕೃಷಿ ಉತ್ಪಾದಕತೆ ಹೊಂದಿರುವ 100 ಜಿಲ್ಲೆಗಳ ಅಭಿವೃದ್ಧಿಗೆ ಗಮನ ನೀಡಲಾಗುವುದು: ಪ್ರಧಾನಮಂತ್ರಿ

ಇಂದು ಜನರು ಪೌಷ್ಟಿಕಾಂಶದ ಬಗ್ಗೆ ಬಹಳ ಜಾಗೃತರಾಗಿದ್ದಾರೆ, ಆದ್ದರಿಂದ ತೋಟಗಾರಿಕೆ, ಡೈರಿ ಮತ್ತು ಮೀನುಗಾರಿಕೆ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಈ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಯನ್ನು ಮಾಡಲಾಗಿದೆ; ಹಣ್ಣು ಮತ್ತು ತರಕಾರಿಗಳ ಉತ್ಪಾದನೆಯನ್ನು ಹೆಚ್ಚಿಸಲು ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ: ಪ್ರಧಾನಮಂತ್ರಿ

ಬಿಹಾರದಲ್ಲಿ ಮಖಾನಾ ಮಂಡಳಿ ರಚನೆಯನ್ನು ಘೋಷಿಸಿದ್ದೇವೆ: ಪ್ರಧಾನಮಂತ್ರಿ

ಗ್ರಾಮೀಣ ಆರ್ಥಿಕತೆಯನ್ನು ಶ್ರೀಮಂತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಅಡಿಯಲ್ಲಿ ಕೋಟ್ಯಂತರ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ, ಸ್ವಾಮಿತ್ವ ಯೋಜನೆಯು ಆಸ್ತಿ ಮಾಲೀಕರಿಗೆ 'ಹಕ್ಕುಗಳ ದಾಖಲೆ' ಒದಗಿಸಿದೆ: ಪ್ರಧಾನಮಂತ್ರಿ

Posted On: 01 MAR 2025 1:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಬಜೆಟ್ ನಂತರದ ವೆಬಿನಾರ್‌ ನಲ್ಲಿ ಭಾಗವಹಿಸುವಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಿಯವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ವರ್ಷದ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ, ಇದು ನೀತಿಗಳಲ್ಲಿ ನಿರಂತರತೆ ಮತ್ತು ವಿಕಸಿತ ಭಾರತದ ದೃಷ್ಟಿಯ ಹೊಸ ವಿಸ್ತರಣೆಯನ್ನು ಪ್ರತಿಬಿಂಬಿಸುತ್ತದೆ. ಬಜೆಟ್‌ ಗೆ ಮೊದಲು ಎಲ್ಲಾ ಭಾಗೀದಾರರಿಂದ ಪಡೆದ ಅಮೂಲ್ಯವಾದ ಒಳಹರಿವು ಮತ್ತು ಸಲಹೆಗಳನ್ನು ಅವರು ಶ್ಲಾಘಿಸಿದರು, ಅದು ತುಂಬಾ ಉಪಯುಕ್ತವಾಗಿದ್ದವು. ಈ ಬಜೆಟ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಭಾಗೀದಾರರ ಪಾತ್ರವು ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.‌

"ವಿಕಸಿತ ಹೊಂದಿದ ಭಾರತದ ಗುರಿಯತ್ತ ನಮ್ಮ ಸಂಕಲ್ಪವು ತುಂಬಾ ಸ್ಪಷ್ಟವಾಗಿದೆ ಮತ್ತು ರೈತರು ಸಮೃದ್ಧಿ ಮತ್ತು ಸಬಲರಾಗಿರುವ ಭಾರತವನ್ನು ನಾವು ಒಟ್ಟಾಗಿ ನಿರ್ಮಿಸುತ್ತಿದ್ದೇವೆ" ಎಂದು ಶ್ರೀ ಮೋದಿ ಹೇಳಿದರು. ಯಾವ ರೈತನೂ ಹಿಂದೆ ಬೀಳದಂತೆ, ಪ್ರತಿಯೊಬ್ಬ ರೈತರನ್ನು ಮುಂದೆ ಕೊಂಡೊಯ್ಯುವುದು ನಮ್ಮ ಪ್ರಯತ್ನ ಎಂದು ಒತ್ತಿ ಹೇಳಿದರು. ಕೃಷಿಯನ್ನು ಅಭಿವೃದ್ಧಿಯ ಮೊದಲ ಎಂಜಿನ್ ಎಂದು ಪರಿಗಣಿಸಲಾಗಿದೆ, ಇದು ರೈತರಿಗೆ ಹೆಮ್ಮೆಯ ಸ್ಥಾನವನ್ನು ನೀಡುತ್ತದೆ ಎಂದು ಹೇಳಿದರು. "ಭಾರತವು ಏಕಕಾಲದಲ್ಲಿ ಎರಡು ಪ್ರಮುಖ ಗುರಿಗಳಾದ ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ಹಳ್ಳಿಗಳ ಸಮೃದ್ಧಿಗಾಗಿ ಕೆಲಸ ಮಾಡುತ್ತಿದೆ" ಎಂದು ಅವರು ಹೇಳಿದರು.

ಆರು ವರ್ಷಗಳ ಹಿಂದೆ ಜಾರಿಗೆ ತಂದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಸುಮಾರು 3.75 ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಮತ್ತು ಈ ಮೊತ್ತವನ್ನು ನೇರವಾಗಿ 11 ಕೋಟಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಶ್ರೀ ಮೋದಿ ಹೇಳಿದರು. ವಾರ್ಷಿಕ 6,000 ರೂ.ಗಳ ಆರ್ಥಿಕ ನೆರವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತಿದೆ ಎಂದು ಅವರು ಒತ್ತಿ ಹೇಳಿದರು. ದೇಶದಾದ್ಯಂತದ ರೈತರಿಗೆ ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸಲು ರೈತ ಕೇಂದ್ರಿತ ಡಿಜಿಟಲ್ ಮೂಲಸೌಕರ್ಯವನ್ನು ರಚಿಸಲಾಗಿದೆ ಎಂದು ಅವರು ಹೇಳಿದರು, ಮಧ್ಯವರ್ತಿಗಳಿಗೆ ಅಥವಾ ಸೋರಿಕೆಗೆ ಯಾವುದೇ ಅವಕಾಶವಿಲ್ಲ. ತಜ್ಞರು ಮತ್ತು ದೂರದರ್ಶಿ ವ್ಯಕ್ತಿಗಳ ಸಹಕಾರದಿಂದ ಇಂತಹ ಯೋಜನೆಗಳ ಯಶಸ್ಸು ಸಾಧ್ಯ ಎಂದು ಪ್ರಧಾನಿ ಹೇಳಿದರು. ಅವರ ಸಹಾಯದಿಂದ ಯಾವುದೇ ಯೋಜನೆಯನ್ನು ಪೂರ್ಣ ಶಕ್ತಿ ಮತ್ತು ಪಾರದರ್ಶಕತೆಯಿಂದ ಜಾರಿಗೊಳಿಸಬಹುದು ಎಂದು ಹೇಳಿದರು. ಅವರ ಪ್ರಯತ್ನವನ್ನು ಶ್ಲಾಘಿಸಿದ ಅವರು, ಈ ವರ್ಷದ ಬಜೆಟ್‌ ನಲ್ಲಿ ಮಾಡಿದ ಘೋಷಣೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ವೇಗವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅವರ ನಿರಂತರ ಸಹಕಾರವನ್ನು ನಿರೀಕ್ಷಿಸುತ್ತದೆ ಎಂದು ಹೇಳಿದರು.

ಭಾರತದ ಕೃಷಿ ಉತ್ಪಾದನೆಯು ದಾಖಲೆಯ ಮಟ್ಟವನ್ನು ತಲುಪಿದೆ ಎಂದು ಒತ್ತಿ ಹೇಳಿದ ಪ್ರಧಾನಿಯವರು, 10-11 ವರ್ಷಗಳ ಹಿಂದೆ ಕೃಷಿ ಉತ್ಪಾದನೆಯು ಸುಮಾರು 265 ಮಿಲಿಯನ್ ಟನ್‌ ಗಳಷ್ಟಿತ್ತು, ಅದು ಈಗ 330 ಮಿಲಿಯನ್ ಟನ್‌ ಗಳಿಗಿಂತ ಹೆಚ್ಚಾಗಿದೆ ಎಂದು ಹೇಳಿದರು. ಅದೇ ರೀತಿ, ತೋಟಗಾರಿಕೆ ಉತ್ಪಾದನೆಯು 350 ಮಿಲಿಯನ್ ಟನ್‌ ಗಳನ್ನು ಮೀರಿದೆ. ಬೀಜದಿಂದ ಮಾರುಕಟ್ಟೆಯವರೆಗೆ ಸರ್ಕಾರದ ವಿಧಾನ, ಕೃಷಿ ಸುಧಾರಣೆಗಳು, ರೈತರ ಸಬಲೀಕರಣ ಮತ್ತು ಬಲವಾದ ಮೌಲ್ಯ ಸರಪಳಿ ಈ ಯಶಸ್ಸಿಗೆ ಕಾರಣ ಎಂದು ಅವರು ಹೇಳಿದರು. ದೇಶದ ಕೃಷಿ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಮತ್ತು ಇನ್ನೂ ದೊಡ್ಡ ಗುರಿಗಳನ್ನು ಸಾಧಿಸುವ ಅಗತ್ಯವನ್ನು ಶ್ರೀ ಮೋದಿ ಒತ್ತಿ ಹೇಳಿದರು. ಈ ದಿಸೆಯಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಬಜೆಟ್‌ ನಲ್ಲಿ ಘೋಷಿಸಲಾಗಿದ್ದು, 100 ಕಡಿಮೆ ಉತ್ಪಾದಕ ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು. ಸಹಯೋಗ, ಸಮನ್ವಯ ಮತ್ತು ಆರೋಗ್ಯಕರ ಸ್ಪರ್ಧೆಯಿಂದ ಪ್ರಯೋಜನ ಪಡೆದ ವಿವಿಧ ಅಭಿವೃದ್ಧಿ ನಿಯತಾಂಕಗಳ ಮೇಲೆ ಮಹತ್ವಾಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದಿಂದ ಗಮನಿಸಲಾದ ಸಕಾರಾತ್ಮಕ ಫಲಿತಾಂಶಗಳನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಈ ಜಿಲ್ಲೆಗಳ ಫಲಿತಾಂಶಗಳನ್ನು ಅಧ್ಯಯನ ಮಾಡಲು ಮತ್ತು ಈ 100 ಜಿಲ್ಲೆಗಳ ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬರೂ ಕಲಿಕೆಯನ್ನು ಅನ್ವಯಿಸಬೇಕು ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ವರ್ಷಗಳಲ್ಲಿ ಮಾಡಿದ ಪ್ರಯತ್ನಗಳು ದೇಶದಲ್ಲಿ ಬೇಳೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸಿವೆ, ಆದರೆ ದೇಶೀಯ ಬಳಕೆಯ ಇನ್ನೂ ಶೇಕಡಾ 20 ರಷ್ಟು ಆಮದುಗಳ ಮೇಲೆ ಅವಲಂಬಿತವಾಗಿದೆ, ಆದ್ದರಿಂದ ಬೇಳೆಕಾಳುಗಳ ಉತ್ಪಾದನೆಯಲ್ಲಿ ಹೆಚ್ಚಳದ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಭಾರತವು ಕಡಲೆ ಮತ್ತು ಹೆಸರುಕಾಳಿನಲ್ಲಿ ಸ್ವಾವಲಂಬನೆ ಸಾಧಿಸಿದೆ, ಆದರೆ ಬಟಾಣಿ, ಉದ್ದು ಮತ್ತು ಮಸೂರಗಳ ಉತ್ಪಾದನೆಯನ್ನು ವೇಗಗೊಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಬೇಳೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸಲು, ಸುಧಾರಿತ ಬೀಜಗಳ  ಪೂರೈಕೆಯನ್ನು ಕಾಪಾಡಿಕೊಳ್ಳುವುದು ಮತ್ತು ಹೈಬ್ರಿಡ್ ತಳಿಗಳನ್ನು ಉತ್ತೇಜಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು. ಹವಾಮಾನ ಬದಲಾವಣೆ, ಮಾರುಕಟ್ಟೆಯ ಅನಿಶ್ಚಿತತೆ  ಮತ್ತು ಬೆಲೆ ಏರಿಳಿತಗಳಂತಹ ಸವಾಲುಗಳನ್ನು ಎದುರಿಸಲು ಗಮನಹರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಕಳೆದ ದಶಕದಲ್ಲಿ, ಐಸಿಎಆರ್ ತನ್ನ ಸಂತಾನೋತ್ಪತ್ತಿ ಕಾರ್ಯಕ್ರಮದಲ್ಲಿ ಆಧುನಿಕ ಉಪಕರಣಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿದೆ ಮತ್ತು ಇದು 2014 ಮತ್ತು 2024 ರ ನಡುವೆ ಧಾನ್ಯಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಮೇವು ಮತ್ತು ಕಬ್ಬು ಸೇರಿದಂತೆ 2,900 ಕ್ಕೂ ಹೆಚ್ಚು ಹೊಸ ಬೆಳೆಗಳ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಹೊಸ ತಳಿಗಳು ಕೈಗೆಟಕುವ ದರದಲ್ಲಿ ರೈತರಿಗೆ ಲಭ್ಯವಾಗುವಂತೆ ಮತ್ತು ಹವಾಮಾನ ಏರಿಳಿತಗಳಿಂದ ಅವುಗಳ ಇಳುವರಿ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಈ ವರ್ಷದ ಬಜೆಟ್‌ ನಲ್ಲಿ ಹೆಚ್ಚಿನ ಇಳುವರಿ ಬೀಜಗಳಿಗಾಗಿ ರಾಷ್ಟ್ರೀಯ ಮಿಷನ್ ಘೋಷಣೆಯನ್ನು ಅವರು ಪ್ರಸ್ತಾಪಿಸಿದರು. ಖಾಸಗಿ ವಲಯದ ಭಾಗವಹಿಸುವವರು ಈ ಬೀಜಗಳ ಪ್ರಸರಣಕ್ಕೆ ಒತ್ತು ನೀಡಬೇಕು ಮತ್ತು ಬೀಜ ಸರಪಳಿಯ ಭಾಗವಾಗುವುದರ ಮೂಲಕ ಸಣ್ಣ ರೈತರನ್ನು ತಲುಪಬೇಕು ಎಂದು ಅವರು ಒತ್ತಾಯಿಸಿದರು.

ಇಂದು ಪೌಷ್ಠಿಕಾಂಶದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತೋಟಗಾರಿಕೆ, ಡೈರಿ ಮತ್ತು ಮೀನುಗಾರಿಕೆ ಉತ್ಪನ್ನಗಳಂತಹ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಯನ್ನು ಮಾಡಲಾಗಿದೆ ಎಂದು ಒತ್ತಿ ಹೇಳಿದರು. ಹಣ್ಣು ಮತ್ತು ತರಕಾರಿ ಉತ್ಪಾದನೆಗೆ ಉತ್ತೇಜನ ನೀಡಲು ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ಬಿಹಾರದಲ್ಲಿ ಮಖಾನಾ ಮಂಡಳಿ ರಚನೆಯನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದರು. ವೈವಿಧ್ಯಮಯ ಪೌಷ್ಠಿಕಾಂಶದ ಆಹಾರಗಳನ್ನು ಉತ್ತೇಜಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲು, ದೇಶದ ಮೂಲೆ ಮೂಲೆಗೆ ಮತ್ತು ಜಾಗತಿಕ ಮಾರುಕಟ್ಟೆಗೆ ತಮ್ಮ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ಅವರು ಎಲ್ಲಾ ಭಾಗೀದಾರರನ್ನು ಒತ್ತಾಯಿಸಿದರು.

ಮೀನುಗಾರಿಕಾ ವಲಯದ ಮೌಲ್ಯ ಸರಪಳಿ, ಮೂಲಸೌಕರ್ಯ ಮತ್ತು ಆಧುನೀಕರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಿದ್ದನ್ನು ಸ್ಮರಿಸಿದ ಪ್ರಧಾನಿ, ಈ ಉಪಕ್ರಮವು ಮೀನುಗಾರಿಕಾ ವಲಯದಲ್ಲಿ ಉತ್ಪಾದನೆ, ಉತ್ಪಾದಕತೆ ಮತ್ತು ಕೊಯ್ಲಿನ ನಂತರದ ನಿರ್ವಹಣೆಯನ್ನು ಸುಧಾರಿಸಿದೆ ಮತ್ತು ವಿವಿಧ ಯೋಜನೆಗಳ ಮೂಲಕ ಈ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಿದೆ, ಇದರ ಪರಿಣಾಮವಾಗಿ ಮೀನು ಉತ್ಪಾದನೆ ಮತ್ತು ರಫ್ತು ಎರಡು ಪಟ್ಟು ಹೆಚ್ಚಾಗಿದೆ. ಭಾರತೀಯ ವಿಶೇಷ ಆರ್ಥಿಕ ವಲಯದಲ್ಲಿ ಮತ್ತು ಸಮುದ್ರದಲ್ಲಿ ಸುಸ್ಥಿರ ಮೀನುಗಾರಿಕೆಯನ್ನು ಉತ್ತೇಜಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಈ ಉದ್ದೇಶಕ್ಕಾಗಿ ಯೋಜನೆಯನ್ನು ಸಿದ್ಧಪಡಿಸಲಾಗುವುದು. ಈ ವಲಯದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಮತ್ತು ಸಾಧ್ಯವಾದಷ್ಟು ಬೇಗ ಕೆಲಸ ಮಾಡಲು ಪ್ರಾರಂಭಿಸಲು ಚಿಂತನೆ ಮಾಡುವಂತೆ ಶ್ರೀ ಮೋದಿ ಭಾಗೀದಾರರನ್ನು ಒತ್ತಾಯಿಸಿದರು. ಸಾಂಪ್ರದಾಯಿಕ ಮೀನುಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.

"ಗ್ರಾಮೀಣ ಆರ್ಥಿಕತೆಯನ್ನು ಶ್ರೀಮಂತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದು ಪ್ರಧಾನಿ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಅಡಿಯಲ್ಲಿ ಕೋಟ್ಯಂತರ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ ಮತ್ತು ಸ್ವಾಮಿತ್ವ ಯೋಜನೆಯು ಆಸ್ತಿ ಮಾಲೀಕರಿಗೆ 'ಹಕ್ಕುಗಳ ದಾಖಲೆ' ಒದಗಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಸ್ವಸಹಾಯ ಗುಂಪುಗಳ ಆರ್ಥಿಕ ಶಕ್ತಿ ಹೆಚ್ಚಿದೆ ಮತ್ತು ಅವುಗಳಿಗೆ ಹೆಚ್ಚುವರಿ ಬೆಂಬಲ ದೊರೆತಿದೆ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ಸಣ್ಣ ರೈತರು ಮತ್ತು ಉದ್ದಿಮೆದಾರರು ಲಾಭ ಪಡೆದಿದ್ದಾರೆ ಎಂದು ಹೇಳಿದರು. 3 ಕೋಟಿ ಲಕ್ಷಾಧಿಪತಿ ದೀದಿಗಳನ್ನು ಸೃಷ್ಟಿಸುವ ಗುರಿಯನ್ನು ಪುನರುಚ್ಚರಿಸಿದ ಶ್ರೀ ಮೋದಿ, ಈ ಪ್ರಯತ್ನಗಳ ಫಲವಾಗಿ 1.25 ಕೋಟಿ ಮಹಿಳೆಯರು ಲಕ್ಷಾದಿಪತಿ ದೀದಿಗಳಾಗಿದ್ದಾರೆ, ಗ್ರಾಮೀಣ ಸಮೃದ್ಧಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಈ ಬಜೆಟ್‌ ನಲ್ಲಿ ಮಾಡಿದ ಘೋಷಣೆಗಳು ಅನೇಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿವೆ ಎಂದು ಒತ್ತಿ ಹೇಳಿದರು. ಕೌಶಲ್ಯ ಮತ್ತು ತಂತ್ರಜ್ಞಾನದಲ್ಲಿ ಹೂಡಿಕೆಯು ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು. ಚಾಲ್ತಿಯಲ್ಲಿರುವ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಹೇಗೆ ಎಂಬುದರ ಕುರಿತು ಚರ್ಚಿಸುವಂತೆ ಪ್ರಧಾನಮಂತ್ರಿ ಎಲ್ಲರಿಗೂ ಒತ್ತಾಯಿಸಿದರು. ಅವರ ಸಲಹೆಗಳು ಮತ್ತು ಕೊಡುಗೆಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲರ ಸಕ್ರಿಯ ಭಾಗವಹಿಸುವಿಕೆಯಿಂದ ಗ್ರಾಮಗಳು ಸಬಲೀಕರಣಗೊಳ್ಳುತ್ತವೆ ಮತ್ತು ಗ್ರಾಮೀಣ ಕುಟುಂಬಗಳು ಅಭಿವೃದ್ಧಿ ಹೊಂದುತ್ತವೆ ಎಂದು ಅವರು ಹೇಳಿದರು. ಬಜೆಟ್ ಯೋಜನೆಗಳ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ವೆಬಿನಾರ್ ಸಹಾಯ ಮಾಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಜೆಟ್‌ ನ ಗುರಿಗಳನ್ನು ಸಾಧಿಸಲು ಎಲ್ಲಾ ಭಾಗೀದಾರರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

 

 

*****


(Release ID: 2107298) Visitor Counter : 9