ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ದಿನಾಚರಣೆಯಲ್ಲಿ ಮಾರಿಷಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದರು
Posted On:
12 MAR 2025 3:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ಗಣರಾಜ್ಯದ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಸಮಾರಂಭದಲ್ಲಿ, ಮಾರಿಷಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಧರ್ಮಬೀರ್ ಗೋಖೂಲ್ ಅವರು ಪ್ರಧಾನಿ ಮೋದಿಯವರಿಗೆ ಮಾರಿಷಸ್ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಇಂಡಿಯನ್ ಓಷನ್ (ಜಿ.ಸಿ.ಎಸ್.ಕೆ) ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತದ ನಾಯಕರೊಬ್ಬರು ಈ ಗೌರವಕ್ಕೆ ಪಾತ್ರರಾಗುತ್ತಿರುವುದು ಇದೇ ಮೊದಲು.
ಮಾರಿಷಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಧರಂಬೀರ್ ಗೋಖೂಲ್ ಅವರು ಪ್ರಧಾನಮಂತ್ರಿ ಮೋದಿಯವರಿಗೆ ಮಾರಿಷಸ್ ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿದರು, ಗ್ರ್ಯಾಂಡ್ ಕಮಾಂಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಹಿಂದೂ ಮಹಾಸಾಗರ (GCSK). ಭಾರತದ ನಾಯಕರೊಬ್ಬರು ಈ ಗೌರವಕ್ಕೆ ಪಾತ್ರರಾಗುತ್ತಿರುವುದು ಇದೇ ಮೊದಲು.
ಪ್ರಧಾನಮಂತ್ರಿ ಮೋದಿ ಅವರು ಈ ಪ್ರಶಸ್ತಿಯನ್ನು ಭಾರತ ಮತ್ತು ಮಾರಿಷಸ್ ನಡುವಿನ ವಿಶೇಷ ಸ್ನೇಹಕ್ಕಾಗಿ ಮತ್ತು ಭಾರತದ 140 ಕೋಟಿ ಜನರು ಮತ್ತು ಮಾರಿಷಸ್ ನಲ್ಲಿರುವ ಅವರ 1.3 ಮಿಲಿಯನ್ ಸಹೋದರ ಸಹೋದರಿಯರಿಗೆ ಅರ್ಪಿಸಿದರು.
ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ, ಭಾರತೀಯ ನೌಕಾಪಡೆಯ ಕವಾಯತು ತಂಡವು ಮೆರವಣಿಗೆಯಲ್ಲಿ ಭಾಗವಹಿಸಿತು. ರಾಷ್ಟ್ರೀಯ ದಿನಾಚರಣೆಯೊಂದಿಗೆ ಹೊಂದಿಕೆಯಾಗುವಂತೆ ಭಾರತೀಯ ನೌಕಾ ಹಡಗು ಕೂಡ ಬಂದರಿನಲ್ಲಿ ಲಂಗರು ಹಾಕಿತು.
*****
(Release ID: 2110868)
Visitor Counter : 17
Read this release in:
English
,
Urdu
,
Hindi
,
Nepali
,
Marathi
,
Bengali
,
Manipuri
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam