ಪ್ರಧಾನ ಮಂತ್ರಿಯವರ ಕಛೇರಿ
ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪ – ಪ್ರಧಾನಮಂತ್ರಿ ಕಳವಳ
Posted On:
28 MAR 2025 2:18PM by PIB Bengaluru
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಭೂಕಂಪಗಳ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಪತ್ತಿನಿಂದ ಸಂಕಷ್ಟಕ್ಕೊಳಗಾದವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಅವರು ಮನಃಪೂರ್ವಕವಾಗಿ ಪ್ರಾರ್ಥಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನ ಸರ್ಕಾರ ಮತ್ತು ಜನರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸಲು ಭಾರತ ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಎಕ್ಸ್ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ:
"ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪದ ಪರಿಸ್ಥಿತಿಯ ಕಳವಳಕಾರಿಯಾಗಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತವು ಎಲ್ಲಾ ಸಾಧ್ಯ ನೆರವು ನೀಡಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಾಧಿಕಾರಗಳು ಸಹಕರಿಸುವಂತೆ ಕೋರಲಾಗಿದೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚಿಸಲಾಗಿದೆ.”
*****
(Release ID: 2116206)
Visitor Counter : 29
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam