ಪ್ರಧಾನ ಮಂತ್ರಿಯವರ ಕಛೇರಿ
ಮ್ಯಾನ್ಮಾರ್ ಭೂಕಂಪದ ಹಿನ್ನೆಲೆಯಲ್ಲಿ ಹಿರಿಯ ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ
Posted On:
29 MAR 2025 1:41PM by PIB Bengaluru
ಮ್ಯಾನ್ಮಾರ್‌ನಲ್ಲಿ ಭೂಕಂಪದ ದುರಂತ ಸನ್ನಿವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸವಾಲಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಆಪ್ತ ಸ್ನೇಹಿತ ಮತ್ತು ನೆರೆಹೊರೆಯ ದೇಶವಾದ ಭಾರತದ ದೃಢವಾದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ಈ ವಿಪತ್ತಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರವು ಆಪರೇಷನ್ ಬ್ರಹ್ಮ ಪ್ರಾರಂಭಿಸಿದೆ, ಇದು ವಿಕೋಪದಿಂದ ಬಾಧಿತವಾಗಿರುವ ಪ್ರದೇಶಗಳಿಗೆ ತಕ್ಷಣದ ಪರಿಹಾರ ಮತ್ತು ಸಹಾಯವನ್ನು ಒದಗಿಸುವ ಉಪಕ್ರಮವಾಗಿದೆ.
ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಮ್ಯಾನ್ಮಾರ್‌ನ ಸೀನಿಯರ್ ಜನರಲ್ (ಸೇನಾ ಮುಖ್ಯಸ್ಥ) ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತನಾಡಿದೆ. ವಿನಾಶಕಾರಿ ಭೂಕಂಪದಲ್ಲಿ ಜೀವಹಾನಿಗೆ ತೀವ್ರ ಸಂತಾಪ ತಿಳಿಸಿದೆ. ಆಪ್ತ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿ, ಭಾರತವು ಈ ಸಂಕಷ್ಟದ ಸಮಯದಲ್ಲಿ ಮ್ಯಾನ್ಮಾರ್ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. #OperationBrahma ಉಪಕ್ರಮದ ಭಾಗವಾಗಿ ವಿಪತ್ತು ಪರಿಹಾರ ಸಾಮಗ್ರಿಗಳು, ಮಾನವೀಯ ನೆರವು, ಶೋಧ ಮತ್ತು ರಕ್ಷಣಾ ತಂಡಗಳನ್ನು ಭೂಕಂಪ ಬಾಧಿತ ಪ್ರದೇಶಗಳಿಗೆ ತ್ವರಿತವಾಗಿ ರವಾನಿಸಲಾಗುತ್ತಿದೆ.”
*****
(Release ID: 2116625)
Visitor Counter : 41
Read this release in:
Telugu
,
English
,
Urdu
,
Hindi
,
Marathi
,
Bengali
,
Assamese
,
Punjabi
,
Gujarati
,
Odia
,
Tamil
,
Malayalam