ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್ ನ ಬನಸ್ಕಾಂತದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದ್ದಾರೆ


ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

ಪ್ರಕಟಣಾ ದಿನಾಂಕ: 01 APR 2025 7:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಬನಸ್ಕಾಂತದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:

"ಗುಜರಾತ್ ನ ಬನಸ್ಕಾಂತದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ. ಸ್ಥಳೀಯ ಸರ್ಕಾರವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ: ಪ್ರಧಾನಮಂತ್ರಿ @narendramodi" 

 

 

*****


(ಪ್ರಕಟಣೆ ಐ.ಡಿ.: 2117562) ವಿಸಿಟರ್ ಕೌಂಟರ್ : 42