ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಾಲಿವುಡ್ ನ ಖ್ಯಾತ ನಟ, ನಿರ್ದೇಶಕ ಮನೋಜ್ ಕುಮಾರ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

Posted On: 04 APR 2025 8:34AM by PIB Bengaluru

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮನೋಜ್ ಕುಮಾರ್ ಅವರನ್ನು ಭಾರತೀಯ ಚಿತ್ರರಂಗದ ಐಕಾನ್ ಎಂದು ಶ್ಲಾಘಿಸಿದ ಪ್ರಧಾನಮಂತ್ರಿಗಳು, ಅವರ ಚಿತ್ರಗಳಲ್ಲಿ ದೇಶಭಕ್ತಿ ಪ್ರತಿಫಲಿಸುವ ಅಂಶಗಳು ವಿಶೇಷವಾಗಿ ಎದ್ದುಕಾಣುತ್ತವೆ ಎಂದಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಸಂತಾಪ ಹಂಚಿಕೊಂಡಿರುವ ಪ್ರಧಾನಮಂತ್ರಿಗಳು, 

“ಬಾಲಿವುಡ್ ಚಿತ್ರರಂಗದ ದಂತಕಥೆ, ನಿರ್ದೇಶಕ ಮನೋಜ್ ಕುಮಾರ್ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರು ಭಾರತೀಯ ಚಿತ್ರರಂಗದ ಐಕಾನ್ ಆಗಿದ್ದರು, ದೇಶದ ಬಗ್ಗೆ ಅಪಾರ ಭಕ್ತಿಭಾವನೆ ಹೊಂದಿದ್ದವರು, ಅದು ಅವರ ಚಲನಚಿತ್ರಗಳಲ್ಲಿಯೂ ಪ್ರತಿಫಲಿಸುತ್ತದೆ. ಮನೋಜ್ ಕುಮಾರ್ ಅವರ ಕೆಲಸಗಳು ರಾಷ್ಟ್ರದ ಬಗ್ಗೆ ಹೆಮ್ಮೆ,ಚೈತನ್ಯವನ್ನು ಹುಟ್ಟುಹಾಕಿದ್ದು, ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ, ಓಂ ಶಾಂತಿ.” ಎಂದು ಬರೆದಿದ್ದಾರೆ.

 

 

*****


(Release ID: 2118701) Visitor Counter : 13