ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ

Posted On: 04 APR 2025 2:55PM by PIB Bengaluru

ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮ್ಯಾನ್ಮಾರ್‌ನಲ್ಲಿನ ಭೂಕಂಪದ ನಂತರದ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರು ಚರ್ಚಿಸಿದರು, ಇದರಲ್ಲಿ ಮ್ಯಾನ್ಮಾರ್‌ಗೆ ಮಾನವೀಯ ನೆರವು, ವಿಪತ್ತು ಪರಿಹಾರ ಮತ್ತು ವೈದ್ಯಕೀಯ ನೆರವು ನೀಡಲು "ಆಪರೇಷನ್ ಬ್ರಹ್ಮ" ಅಡಿಯಲ್ಲಿ ಭಾರತ ನಡೆಸುತ್ತಿರುವ ಪ್ರಯತ್ನಗಳು ಸೇರಿವೆ. 

ಭಾರತದ ಸಹಾಯ ಪ್ರಯತ್ನಗಳಿಗೆ ಜನರಲ್ ಕೃತಜ್ಞತೆ ಸಲ್ಲಿಸಿದರು. ಮೊದಲ ಪ್ರತಿಸ್ಪಂದಕರಾಗಿ, ಈ ಬಿಕ್ಕಟ್ಟಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಭಾರತ ನಿಂತಿದೆ ಮತ್ತು ಹೆಚ್ಚಿನ ಅಗತ್ಯ ವಸ್ತುಗಳ ನೆರವು ಮತ್ತು ಸಂಪನ್ಮೂಲಗಳನ್ನು ನಿಯೋಜಿಸಲು ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.

ಎಲ್ಲರನ್ನೂ ಒಳಗೊಂಡ ಮತ್ತು ವಿಶ್ವಾಸಾರ್ಹ ಚುನಾವಣೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯ ಆರಂಭಿಕ ಪುನಃಸ್ಥಾಪನೆಯ ಮಹತ್ವದ ಕುರಿತು ಪ್ರಧಾನಮಂತ್ರಿ  ಹೇಳಿದರು, ವಿಶ್ವಾಸವನ್ನು ಬೆಳೆಸುವ ಮತ್ತು ಶಾಂತಿಯುತ, ಸ್ಥಿರ ಮತ್ತು ಪ್ರಜಾಪ್ರಭುತ್ವ ಭವಿಷ್ಯದತ್ತ ಮ್ಯಾನ್ಮಾರ್ ಒಡೆತನದ ಮತ್ತು ಮ್ಯಾನ್ಮಾರ್ ನೇತೃತ್ವದ ಪರಿವರ್ತನೆಯನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದರು. 

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ ಎಂದು ಹೇಳಿದರು ಮತ್ತು ಎಲ್ಲರನ್ನೂ ಒಳಗೊಂಡ ಸಂವಾದದ ಮೂಲಕ ಮಾತ್ರ ಶಾಶ್ವತ ಶಾಂತಿಯನ್ನು ಸಾಧಿಸಬಹುದು ಎಂದು ಸ್ಪಷ್ಟಪಡಿಸಿದರು.

ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿರುವ ಸೈಬರ್-ಹಗರಣ ಕೇಂದ್ರಗಳಿಂದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಮತ್ತು ಸ್ವದೇಶಕ್ಕೆ ಕಳುಹಿಸಲು ಮ್ಯಾನ್ಮಾರ್ ನೀಡಿದ ಬೆಂಬಲವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಭಾರತ-ಮ್ಯಾನ್ಮಾರ್ ಗಡಿಯಲ್ಲಿ ದಂಗೆಕೋರ ಚಟುವಟಿಕೆಗಳು, ಅಂತಾರಾಷ್ಟ್ರೀಯ ಅಪರಾಧಗಳು ಮತ್ತು ಮಾನವ ಕಳ್ಳಸಾಗಣೆಗಳನ್ನು ಪರಿಹರಿಸುವಲ್ಲಿ ಸಹಕರಿಸುವ ಅಗತ್ಯವನ್ನು ಉಭಯ ದೇಶಗಳ ನಾಯಕರು ಒಪ್ಪಿಕೊಂಡರು.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಭಾರತ ಬೆಂಬಲಿತ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. ಮ್ಯಾನ್ಮಾರ್‌ನ ಎಲ್ಲಾ ಸಮುದಾಯಗಳ ಅಭಿವೃದ್ಧಿ ಅಗತ್ಯಗಳನ್ನು ಬೆಂಬಲಿಸಲು ಭಾರತ ಸದಾ ಬದ್ಧವಾಗಿದೆ ಎಂದು ಪ್ರಧಾನಮಂತ್ರಿಗಳು ತಿಳಿಸಿದರು.

 

*****


(Release ID: 2118909) Visitor Counter : 12