ಆಯುಷ್
ಥೈಲ್ಯಾಂಡ್ ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ಔಷಧಕ್ಕಾಗಿ ಶ್ರೇಷ್ಠತಾ ಕೇಂದ್ರವನ್ನು ಘೋಷಿಸಿದರು
ಬಿಮ್‌ಸ್ಟೆಕ್ ದೇಶಗಳಲ್ಲಿ ಕ್ಯಾನ್ಸರ್ ಆರೈಕೆಯಲ್ಲಿ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗೆ ಭಾರತ ಬೆಂಬಲ ನೀಡಲಿದೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ: ಪ್ರಧಾನಮಂತ್ರಿ
ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಶೈಕ್ಷಣಿಕ ಸಹಯೋಗವನ್ನು ಉತ್ತೇಜಿಸಲು ಉಪಕ್ರಮ
Posted On:
04 APR 2025 8:28PM by PIB Bengaluru
ಬ್ಯಾಂಕಾಕ್ ನಲ್ಲಿ ನಡೆದ ಬಹು ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ (ಬಿಮ್‌ಸ್ಟೆಕ್) ಶೃಂಗಸಭೆಯಲ್ಲಿ ಸಾಂಪ್ರದಾಯಿಕ ಔಷಧದ ಸಂಶೋಧನೆ ಮತ್ತು ಪ್ರಸರಣವನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಘೋಷಿಸಿದರು.

ಈ ಉಪಕ್ರಮವನ್ನು ಘೋಷಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, "ಸಾರ್ವಜನಿಕ ಆರೋಗ್ಯವು ನಮ್ಮ ಸಾಮೂಹಿಕ ಸಾಮಾಜಿಕ ಅಭಿವೃದ್ಧಿಯ ಪ್ರಮುಖ ಆಧಾರಸ್ತಂಭವಾಗಿದೆ. ಬಿಮ್‌ಸ್ಟೆಕ್ ದೇಶಗಳಲ್ಲಿ ಕ್ಯಾನ್ಸರ್ ಆರೈಕೆಯಲ್ಲಿ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗೆ ಭಾರತ ಬೆಂಬಲ ನೀಡಲಿದೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಆರೋಗ್ಯದ ಬಗೆಗಿನ ನಮ್ಮ ಸಮಗ್ರ ವಿಧಾನಕ್ಕೆ ಅನುಗುಣವಾಗಿ, ಸಾಂಪ್ರದಾಯಿಕ ಔಷಧದ ಸಂಶೋಧನೆ ಮತ್ತು ಪ್ರಸರಣವನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರವನ್ನು ಸಹ ಸ್ಥಾಪಿಸಲಾಗುವುದು" ಎಂದು ಹೇಳಿದರು.
ಥೈಲ್ಯಾಂಡ್ ಮತ್ತು ಭಾರತವು ಬಲವಾದ ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳನ್ನು ಮತ್ತು ನಿಕಟವಾದ ಪರಸ್ಪರ ಸಂಬಂಧಗಳನ್ನು ಹೊಂದಿವೆ ಎಂಬುದು ಗಮನಿಸಬೇಕಾದ ಸಂಗತಿ. ಪ್ರಧಾನಮಂತ್ರಿಯವರ ಈ ಘೋಷಣೆಯು ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಮಹತ್ವದ ಉತ್ತೇಜನ ನೀಡಲಿದೆ. ಸಾಂಪ್ರದಾಯಿಕ ಔಷಧದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗವನ್ನು ಬಲಪಡಿಸಲು, ಉತ್ತೇಜಿಸಲು, ಸುಗಮಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುತ್ತಿವೆ.
ಕಳೆದ ವರ್ಷ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಡಿಯಲ್ಲಿ ಜೈಪುರದ ರಾಷ್ಟ್ರೀಯ ಆಯುರ್ವೇದ ಸಂಸ್ಥೆ ಮತ್ತು ಥೈಲ್ಯಾಂಡ್ ಸರ್ಕಾರದ ಸಾರ್ವಜನಿಕ ಆರೋಗ್ಯ ಸಚಿವಾಲಯದ ಥಾಯ್ ಸಾಂಪ್ರದಾಯಿಕ ಮತ್ತು ಪರ್ಯಾಯ ಔಷಧ ಇಲಾಖೆಯು, ನವದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ನಡೆದ 10ನೇ ಭಾರತ-ಥೈಲ್ಯಾಂಡ್ ಜಂಟಿ ಆಯೋಗದ ಸಭೆಯಲ್ಲಿ ಆಯುರ್ವೇದ ಮತ್ತು ಥಾಯ್ ಸಾಂಪ್ರದಾಯಿಕ ಔಷಧದಲ್ಲಿ ಶೈಕ್ಷಣಿಕ ಸಹಯೋಗವನ್ನು ಸ್ಥಾಪಿಸುವ ಕುರಿತು ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದವು ಎಂಬುದನ್ನು ಸಹ ಗಮನಿಸಬಹುದು.
ಶೈಕ್ಷಣಿಕ ಸಹಯೋಗದಲ್ಲಿ, ಭಾರತ ಸರ್ಕಾರದ ಆಯುಷ್ ಸಚಿವಾಲಯದ ಆಯುಷ್ ವಿದ್ಯಾರ್ಥಿವೇತನ ಯೋಜನೆಯನ್ನು ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ಐಸಿಸಿಆರ್) ಮೂಲಕ ನೀಡಲಾಗುತ್ತದೆ. ಆಯುರ್ವೇದ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ, ಯೋಗದಲ್ಲಿ ಬಿ.ಎಸ್ಸಿ., ಯೋಗ ಶಾಸ್ತ್ರದಲ್ಲಿ ಬಿ.ಎ., ಯೋಗದಲ್ಲಿ ಪಿ ಎಚ್ ಡಿ ಮತ್ತು ಆಯುರ್ವೇದದಲ್ಲಿ ಪಿ ಎಚ್ ಡಿ ಪದವಿಗಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ, ಬಿಮ್‌ಸ್ಟೆಕ್ ಪ್ರದೇಶಗಳಿಂದ 175 ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.
ಭಾರತ ಮತ್ತು ಥೈಲ್ಯಾಂಡ್ ಸಾಂಪ್ರದಾಯಿಕ ಔಷಧ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ದೀರ್ಘ ಇತಿಹಾಸವನ್ನು ಹೊಂದಿವೆ. ಸಾಂಪ್ರದಾಯಿಕ ಔಷಧದ ಸಂಶೋಧನೆ ಮತ್ತು ಪ್ರಸರಣವನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸುವ ಘೋಷಣೆಯು ಈ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ.
*****
(Release ID: 2119108)
Visitor Counter : 9