ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳಿಂದ ದುಬೈ ಯುವರಾಜರ ಭೇಟಿ


ಭಾರತ-ಯುಎಇ ಬಾಂಧವ್ಯ ಬಲವರ್ಧನೆಗೆ ಬದ್ಧತೆಯ ಪುನರುಚ್ಚಾರ

प्रविष्टि तिथि: 08 APR 2025 4:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ದುಬೈನ ಯುವರಾಜ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿ ಮಾಡಿದರು. ಭಾರತ-ಯುಎಇ ಬಾಂಧವ್ಯವನ್ನು ಬಲಪಡಿಸುವ ಬದ್ಧತೆಯನ್ನು ಶ್ರೀ ಮೋದಿ ಅವರು ಪುನರುಚ್ಚರಿಸಿದರು.  ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ದುಬೈ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದರು. 

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ: 

“ದುಬೈ ಯುವರಾಜ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿಯಾಗಿ ಸಂತೋಷವಾಗಿದೆ. ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ದುಬೈ ಪ್ರಮುಖ ಪಾತ್ರ ವಹಿಸಿದೆ. ಈ ವಿಶೇಷ ಭೇಟಿಯು ಆಳವಾಗಿ ಬೇರೂರಿರುವ ನಮ್ಮ ಸ್ನೇಹವನ್ನು ಪುನರ್ ದೃಢೀಕರಿಸುತ್ತದೆ ಮತ್ತು ಭವಿಷ್ಯದಲ್ಲಿ ಇನ್ನಷ್ಟು ಸದೃಢ ಸಹಯೋಗಕ್ಕೆ ದಾರಿ ಮಾಡಿಕೊಡಲಿದೆ.

@HamdanMohammed”

 

 

*****


(रिलीज़ आईडी: 2120105) आगंतुक पटल : 40
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam