ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಸಾವು - ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್)ಯಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
13 APR 2025 6:54PM by PIB Bengaluru
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಕಾರ್ಖಾನೆ ಅವಘಡದಲ್ಲಿ ಜೀವಹಾನಿಯಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಪೋಸ್ಟ್ ಹೀಗಿದೆ:
“ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ.
ಈ ಅವಘಡದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿಎಂಎನ್‌ಆರ್‌ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”
"ఆంధ్రప్రదేశ్ లోని అనకాపల్లి జిల్లా ఫ్యాక్టరీ ప్రమాదంలో జరిగిన ప్రాణనష్టం అత్యంత బాధాకరం. ఈ ప్రమాదంలో తమ ఆత్మీయులను కోల్పోయిన వారికి ప్రగాఢ సానుభూతి తెలియజేస్తున్నాను. క్షతగాత్రులు త్వరగా కోలుకోవాలని ప్రార్థిస్తున్నాను. స్థానిక యంత్రాంగం బాధితులకు సహకారం అందజేస్తోంది. ఈ ప్రమాదంలో మరణించిన వారి కుటుంబాలకు పి.ఎం.ఎన్.ఆర్.ఎఫ్. నుంచి రూ. 2 లక్షలు ఎక్స్ గ్రేషియా, గాయపడిన వారికి రూ. 50,000 అందజేయడం జరుగుతుంది : PM@narendramodi"
*****
(ಪ್ರಕಟಣೆ ಐ.ಡಿ.: 2121493)
ವಿಸಿಟರ್ ಕೌಂಟರ್ : 69
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam