ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಭಾರತದ ರಾಷ್ಟ್ರಪತಿಗಳಿಂದ ಶುಭಾಶಯ

Posted On: 13 APR 2025 5:20PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಮುನ್ನಾ ದಿನದಂದು ಸಹ-ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ‌ ಹೀಗೆ ಹೇಳಿದ್ದಾರೆ, “ನಮ್ಮ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು.

ಬಾಬಾಸಾಹೇಬ್ ಅವರ ಜೀವನ ಸ್ಪೂರ್ತಿದಾಯಕವಾಗಿದ್ದು, ಅವರು ಜೀವನದಲ್ಲಿ ತೀವ್ರ ತೊಂದರೆಗಳನ್ನು ಎದುರಿಸುತ್ತಿದ್ದರೂ ಸಹ ತಮ್ಮದೇ ಆದ ವಿಶಿಷ್ಟ ಗುರುತನ್ನು ರೂಪಿಸಿಕೊಂಡಿದ್ದರು ಮತ್ತು ತಮ್ಮ ಅನನ್ಯ ಸಾಧನೆಗಳಿಂದ ಪ್ರಪಂಚದಾದ್ಯಂತ ಮನ್ನಣೆ ಪಡೆದಿದ್ದರು.

ಬಹುಮುಖ ವ್ಯಕ್ತಿತ್ವ ಹೊಂದಿದ್ದ ಅದ್ಭುತ ಸಾಮರ್ಥ್ಯಗಳ ವ್ಯಕ್ತಿಯಾಗಿದ್ದ ಬಾಬಾಸಾಹೇಬ್ ಅವರು ಒಬ್ಬ ಅರ್ಥಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನ್ಯಾಯಶಾಸ್ತ್ರಜ್ಞರು ಮತ್ತು ಮಹಾನ್ ಸಮಾಜ ಸುಧಾರಕರಾಗಿದ್ದರು. ಅವರು ಸಮ ಸಮಾಜದ ಪ್ರತಿಪಾದಕರಾಗಿದ್ದರು ಹಾಗೂ ಮಹಿಳೆಯರು ಮತ್ತು ಅವಕಾಶ ವಂಚಿತ / ದುರ್ಬಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳಿಗಾಗಿ ಜೀವಮಾನವಿಡೀ ಹೋರಾಟ ನಡೆಸಿದರು. ಸಾಮಾಜಿಕ ಬದಲಾವಣೆ ಮತ್ತು ದೀನದಲಿತರ ಸಬಲೀಕರಣಕ್ಕೆ ಶಿಕ್ಷಣವು ಒಂದು ಪ್ರಮುಖ ಸಾಧನವೆಂದು ಅವರು ಪರಿಗಣಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳು ರಾಷ್ಟ್ರ ನಿರ್ಮಾಣಕ್ಕಾಗಿ ಬದ್ಧತೆಯೊಂದಿಗೆ ಕೆಲಸ ಮಾಡಲು ಭವಿಷ್ಯದ ಪೀಳಿಗೆಗೆ ಪ್ರೇರಣೆ ನೀಡಲಿವೆ. 

ಈ ಸಂದರ್ಭದಲ್ಲಿ, ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿ ಹಾಗೂ ಸಾಮಾಜಿಕ ಸಾಮರಸ್ಯ ಮತ್ತು ಸಮಾನತೆಯ ಭಾವವನ್ನು ಸಾಕಾರಗೊಳಿಸುವ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸುವುದಾಗಿ ಪ್ರತಿಜ್ಞೆ ಮಾಡೋಣ”.

ರಾಷ್ಟ್ರಪತಿಗಳ ಸಂದೇಶವನ್ನು ನೋಡಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ -

 

*****


(Release ID: 2121500) Visitor Counter : 25