ಪ್ರಧಾನ ಮಂತ್ರಿಯವರ ಕಛೇರಿ
ಯಮುನಾ ಶುದ್ಧೀಕರಣ ಮತ್ತು ಪುನಶ್ಚೇತನ ಕುರಿತು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ
प्रविष्टि तिथि:
17 APR 2025 10:51PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಮತ್ತು ಪುನರುಜ್ಜೀವನಗೊಳಿಸುವುದು ಮತ್ತು ದೆಹಲಿಯ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೆಹಲಿಯ ಜನರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ‘ಸುಗಮ ಜೀವನ’ವನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ದೆಹಲಿ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ಎಂದು ಅವರು ದೃಢಪಡಿಸಿದರು.
ಈ ಸಂಬಂಧ ಅವರು ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ:
‘‘ನಿನ್ನೆ, ಯಮುನಾವನ್ನು ಸ್ವಚ್ಛಗೊಳಿಸುವ ಮತ್ತು ಪುನರುಜ್ಜೀವನಗೊಳಿಸುವ ಮತ್ತು ದೆಹಲಿಯ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸಭೆ ನಡೆಸಲಾಯಿತು. ದೆಹಲಿಯ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ‘ಸುಗಮ ಜೀವನ’ವನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ದೆಹಲಿ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ,’’ ಎಂದು ಹೇಳಿದರು.
*****
(रिलीज़ आईडी: 2122613)
आगंतुक पटल : 41
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam