ಪ್ರಧಾನ ಮಂತ್ರಿಯವರ ಕಛೇರಿ
ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
Posted On:
19 APR 2025 9:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪಿಎಂಒ ಇಂಡಿಯಾ ಹ್ಯಾಂಡಲ್ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
"ಈಶಾನ್ಯ ದಿಲ್ಲಿಯ ದಯಾಲ್ಪುರ ಪ್ರದೇಶದಲ್ಲಿ ಕಟ್ಟಡ ಕುಸಿತದಿಂದಾಗಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ ನೀಡಲಾಗುವುದು: ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ @narendramodi"
*****
(Release ID: 2123099)
Read this release in:
Odia
,
English
,
Urdu
,
Marathi
,
Hindi
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam