ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಿನ್ನೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದರು


ಭಾರತವು ಭಯೋತ್ಪಾದನೆಗೆ ಬಗ್ಗುವುದಿಲ್ಲ ಮತ್ತು ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ

ಶ್ರೀ ಅಮಿತ್ ಶಾ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಪ್ರತಿಯೊಬ್ಬ ಭಾರತೀಯನೂ ಅನುಭವಿಸುತ್ತಾನೆ, ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು

ಕೇಂದ್ರ ಗೃಹ ಸಚಿವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು

ಶ್ರೀ ಅಮಿತ್ ಶಾ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರನ್ನು ಭೇಟಿ ಮಾಡಿದರು ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದರು

Posted On: 23 APR 2025 9:17PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದರು. ಭಾರತವು ಭಯೋತ್ಪಾದನೆಗೆ ಬಗ್ಗುವುದಿಲ್ಲ ಮತ್ತು ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಶ್ರೀ ಅಮಿತ್ ಶಾ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳನ್ನು ಭೇಟಿಯಾದರು. ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಪ್ರತಿಯೊಬ್ಬ ಭಾರತೀಯನೂ ಅನುಭವಿಸುತ್ತಾನೆ ಮತ್ತು ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಗೃಹ ಸಚಿವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ವಿವರವಾದ ಮಾಹಿತಿ ಪಡೆದರು.

ಶ್ರೀ ಅಮಿತ್ ಶಾ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರನ್ನು ಭೇಟಿ ಮಾಡಿದರು ಮತ್ತು ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದರು.

 

 

*****


(Release ID: 2123978) Visitor Counter : 23