ಪ್ರಧಾನ ಮಂತ್ರಿಯವರ ಕಛೇರಿ
ಡಾ. ಕೆ. ಕಸ್ತೂರಿರಂಗನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
25 APR 2025 2:34PM by PIB Bengaluru
ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ವಲಯದ ಅಗ್ರಮಾನ್ಯರಾದ ಡಾ. ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಡಾ. ಕೆ. ಕಸ್ತೂರಿರಂಗನ್ ಅವರು ಇಸ್ರೋಗೆ ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು, ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಮುನ್ನಡೆಸಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. "ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಕರಡು ರಚನೆಯ ಪ್ರಕ್ರಿಯೆಯಲ್ಲಿ ಹಾಗೂ ಭಾರತದಲ್ಲಿ ಕಲಿಕೆಯನ್ನು ಹೆಚ್ಚು ಸಮಗ್ರವಾಗಿಸಲು ಮತ್ತು ಮುನ್ನಡೆಸಲು ಡಾ. ಕಸ್ತೂರಿರಂಗನ್ ಅವರ ಪ್ರಯತ್ನಗಳಿಗಾಗಿ ಭಾರತ ಅವರಿಗೆ ಸದಾ ಚಿರ ಋಣಿಯಾಗಿರಲಿದೆ. ಅವರು ಅನೇಕ ಯುವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು" ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ಪಯಣದ ಮೇರು ವ್ಯಕ್ತಿ ಡಾ. ಕೆ. ಕಸ್ತೂರಿರಂಗನ್ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ದೇಶಕ್ಕೆ ನಿಸ್ವಾರ್ಥ ಕೊಡುಗೆಯು ಸದಾ ಸ್ಮರಣೀಯ.
ಇಸ್ರೋದಲ್ಲಿ ಅವರು ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿ, ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪರಿಣಾಮವಾಗಿ ಜಾಗತಿಕ ಮನ್ನಣೆ ಲಭಿಸಿತು. ಅವರ ನಾಯಕತ್ವವು ಮಹತ್ವಾಕಾಂಕ್ಷೆಯ ಉಪಗ್ರಹ ಉಡಾವಣೆಗಳಿಗೆ ಸಾಕ್ಷಿಯಾಗಿತ್ತು ಮತ್ತು ಅವರು ನಾವಿನ್ಯತೆಗೆ ಆದ್ಯತೆ ನೀಡಿದ್ದರು".
ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ರಚನಾ ಪ್ರಕ್ರಿಯೆಯಲ್ಲಿ ಹಾಗೂ ಭಾರತದಲ್ಲಿ ಕಲಿಕೆಯನ್ನು ಹೆಚ್ಚು ಸಮಗ್ರಗೊಳಿಸಲು ಮತ್ತು ಮುನ್ನಡೆಸುವಂತಿರುವುದನ್ನು ಖಚಿತಪಡಿಸಿಕೊಳ್ಳಲು ಡಾ. ಕಸ್ತೂರಿರಂಗನ್ ಅವರ ಪ್ರಯತ್ನಗಳಿಗಾಗಿ ಭಾರತವು ಅವರಿಗೆ ಸದಾ ಕೃತಜ್ಞರಾಗಿರಲಿದೆ.
ಅವರು ಅನೇಕ ಯುವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು. ಅವರ ಕುಟುಂಬಸ್ಥರು, ವಿದ್ಯಾರ್ಥಿಗಳು, ವಿಜ್ಞಾನಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”
*****
(Release ID: 2124274)
Visitor Counter : 16
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam