ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕರ ಪುರಸ್ಕಾರ ಸಮಾರಂಭ – I ರಲ್ಲಿ ಭಾರತದ ರಾಷ್ಟ್ರಪತಿಗಳಿಂದ 2025ನೇ ಸಾಲಿನ 4 ಪದ್ಮ ವಿಭೂಷಣ, 10 ಪದ್ಮ ಭೂಷಣ ಮತ್ತು 57 ಪದ್ಮಶ್ರೀ ಪುರಸ್ಕಾರಗಳ ಪ್ರದಾನ

Posted On: 28 APR 2025 7:20PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಇಂದು ನಡೆದ ನಾಗರಿಕರ ಪುರಸ್ಕಾರ ಸಮಾರಂಭ – I ರಲ್ಲಿ 2025 ನೇ ಸಾಲಿನ 4 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 57 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.  

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ, ಅನೇಕ ಕೇಂದ್ರ ಸಚಿವರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪದ್ಮ ಪ್ರಶಸ್ತಿ ಪುರಸ್ಕೃತರು ನಾಳೆ 2025ರ ಏಪ್ರಿಲ್ 29 ರಂದು ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಲಿದ್ದಾರೆ. ಅವರು ರಾಷ್ಟ್ರಪತಿ ಭವನ ಮತ್ತು ಪ್ರಧಾನಮಂತ್ರಿ ಸಂಗ್ರಹಾಲಯಕ್ಕೂ ಭೇಟಿ ನೀಡಲಿದ್ದಾರೆ.

 

*****


(Release ID: 2125001) Visitor Counter : 22