ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 29 APR 2025 2:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸ್ಸರ್ ಅವರನ್ನು ಅಭಿನಂದಿಸಿದ್ದಾರೆ. ಭಾರತ ಹಾಗೂ ಟ್ರಿನಿಡಾಡ್ ಮತ್ತು ಟೊಬಾಗೋ ನಡುವಿನ ಐತಿಹಾಸಿಕ ನಿಕಟ ಮತ್ತು ಕೌಟುಂಬಿಕ ಬಾಂಧವ್ಯಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಚುನಾವಣೆಯಲ್ಲಿ ಗೆಲುವು ಸಾಧಿಸಿದ @MPKamla ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಾವು ಟ್ರಿನಿಡಾಡ್ ಮತ್ತು ಟೊಬಾಗೊದೊಂದಿಗೆ ನಮ್ಮ ಐತಿಹಾಸಿಕವಾದ ನಿಕಟ ಮತ್ತು ಕೌಟುಂಬಿಕ ಸಂಬಂಧಗಳನ್ನು ಸಲಹುತ್ತೇವೆ. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಹಂಚಿತ ಸಮೃದ್ಧಿಗಾಗಿ ನಮ್ಮ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ."

 

 

*****


(Release ID: 2125160) Visitor Counter : 12