ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೋಲ್ಕತ್ತಾ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ( ಪಿ.ಎಂ.ಎನ್‌.ಆರ್‌.ಎಫ್‌.) ಪರಿಹಾರ ಘೋಷಣೆ 

Posted On: 30 APR 2025 9:34AM by PIB Bengaluru

ಇಂದು ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಮೃತಪಟ್ಟವರ ಕುಟುಂಬಕ್ಕೆ ರೂ.2 ಲಕ್ಷಗಳನ್ನು ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಯನ್ನು ಪರಿಹಾರವಾಗಿ ಅವರು ಘೋಷಿಸಿದರು.  

ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಮಾಹಿತಿ ನೀಡಿದೆ; 

“ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಆಗಿರುವ ಪ್ರಾಣಹಾನಿಯಿಂದ ಬಹಳಷ್ಟು ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಪರಿಹಾರವಾಗಿ ಮೃತಪಟ್ಟವರ ಕುಟುಂಬಕ್ಕೆ ರೂ.2 ಲಕ್ಷಗಳ ಹಾಗೂ ಗಾಯಗೊಂಡವರಿಗೆ ರೂ.50,000 ಅನುಕಂಪದ ಪರಿಹಾರ ಧನವನ್ನು ನೀಡಲಾಗುತ್ತದೆ: ಪ್ರಧಾನಮಂತ್ರಿ @narendramodi"

 

 

“কলকাতায় অগ্নিকান্ডে প্রাণহানির ঘটনায় আমি মর্মাহত। যারা প্রিয়জনদের হারিয়েছেন, তাঁদের সমবেদনা জানাচ্ছি এবং আহতদের দ্রুত আরোগ্য কামনা করছি। প্রধানমন্ত্রী জাতীয় ত্রাণ তহবিল থেকে মৃতদের প্রত্যেকের নিকটাত্মীয়কে ২ লক্ষ টাকা করে এবং আহতদের ৫০,০০০ টাকা করে আর্থিক সহায়তা দেওয়া হবে : প্রধানমন্ত্রী @narendramodi

 

 

*****


(Release ID: 2125394) Visitor Counter : 6