ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2025ರ ಏಪ್ರಿಲ್ 1 ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ
ಅರ್ಜಿ ಸಲ್ಲಿಸಲು 2025ರ ಜುಲೈ 31 ಕೊನೆಯ ದಿನಾಂಕ
Posted On:
27 MAR 2025 4:53PM by PIB Bengaluru
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ (https://awards.gov.in) ಮೂಲಕ 2025ರ ಏಪ್ರಿಲ್ 1 ರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಅಸಾಧಾರಣ ಮಕ್ಕಳನ್ನು (5-18 ವರ್ಷ ವಯಸ್ಸಿನವರು) ಗೌರವಿಸಲು ಸಚಿವಾಲಯವು ಪ್ರತಿ ವರ್ಷ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡುತ್ತದೆ.

ಭಾರತದಲ್ಲಿ ವಾಸಿಸುವ ಭಾರತೀಯ ಪ್ರಜೆಯಾಗಿರುವ, 5 ವರ್ಷ ಮೇಲ್ಪಟ್ಟ ಮತ್ತು 18 ವರ್ಷ ಮೀರದ (ಜುಲೈ 31, 2025 ರಂತೆ) ಯಾವುದೇ ಮಗು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹ. ಪ್ರಶಸ್ತಿಗಳಿಗೆ ಸ್ವಯಂ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಪರಿಗಣಿಸಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2025ರ ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳು ಜಾಲತಾಣ https://awards.gov.in ನಲ್ಲಿ ಲಭ್ಯ.
ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಹಾಗೂ ಕಲೆ ಮತ್ತು ಸಂಸ್ಕೃತಿ ರಂಗಗಳಲ್ಲಿ ಸಾಧನೆ ಮಾಡಿದ ಅಸಾಧಾರಣ ಮಕ್ಕಳನ್ನು (5-18 ವರ್ಷ ವಯಸ್ಸಿನವರು) ಗೌರವಿಸಲು ಸಚಿವಾಲಯವು ಪ್ರತಿ ವರ್ಷ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡುತ್ತದೆ.
*****
(Release ID: 2126215)