ಪ್ರಧಾನ ಮಂತ್ರಿಯವರ ಕಛೇರಿ
ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
03 MAY 2025 9:12AM by PIB Bengaluru
ಇಂದು ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.
ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಹೀಗೆ ಹೇಳಿದೆ:
"ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2126835)
ವಿಸಿಟರ್ ಕೌಂಟರ್ : 29
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam