ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಸ್ಟ್ರೇಲಿಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ 

Posted On: 03 MAY 2025 6:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀ ಅಂತೋನಿ ಅಲ್ಬನೀಸ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಅವರು ಬರೆದಿದ್ದಾರೆ:

"ಆಸ್ಟ್ರೇಲಿಯದ ಪ್ರಧಾನಮಂತ್ರಿಯಾಗಿ ನಿಮ್ಮ  @AlboMP! ಅದ್ಭುತ ಗೆಲುವು ಮತ್ತು ಮರುಚುನಾವಣೆಯ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಆಸ್ಟ್ರೇಲಿಯದ ಜನರ ನಿರಂತರ ನಂಬಿಕೆಯನ್ನು ಈ ಮತದಾನದ ಆದೇಶವು ಸೂಚಿಸುತ್ತದೆ. ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಮತ್ತು ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯಲ್ಲಿ ನಮ್ಮ ಹಂಚಿಕೆಯ ದೃಷ್ಟಿಯನ್ನು ಮುನ್ನಡೆಸಲು ನಾನು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ."

 

 

*****


(Release ID: 2126838) Visitor Counter : 9