ಪ್ರಧಾನ ಮಂತ್ರಿಯವರ ಕಛೇರಿ
ಐತಿಹಾಸಿಕ ಎರಡನೇ ಅವಧಿಗೆ ಆಯ್ಕೆಯಾದ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು (ಸಿ ಎಸ್ ಪಿ) ಬಲಪಡಿಸುವ ಬದ್ಧತೆಯನ್ನು ನಾಯಕರು ಪುನರುಚ್ಚರಿಸಿದರು
ಪರಸ್ಪರ ಸಂಪರ್ಕದಲ್ಲಿರಲು ಅವರು ಒಪ್ಪಿಕೊಂಡರು ಮತ್ತು ಮುಂದಿನ ಭೇಟಿಯನ್ನು ನಿರೀಕ್ಷಿಸುವುದಾಗಿ ಹೇಳಿದರು
Posted On:
06 MAY 2025 2:07PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಆಸ್ಟ್ರೇಲಿಯಾದ 32ನೇ ಪ್ರಧಾನಮಂತ್ರಿಯಾಗಿ ಐತಿಹಾಸಿಕ ರೀತಿಯಲ್ಲಿ ಪುನರಾಯ್ಕೆಗೊಂಡುದಕ್ಕಾಗಿ ಅವರನ್ನು ಅಭಿನಂದಿಸಿದರು.
ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು (ಸಿ ಎಸ್ ಪಿ) ಬಲಪಡಿಸುವ ಬದ್ಧತೆಯನ್ನು ಪ್ರಧಾನಮಂತ್ರಿಗಳು ಪುನರುಚ್ಚರಿಸಿದರು. ಸಿ ಎಸ್ ಪಿ ತನ್ನ ಐದು ವರ್ಷಗಳಲ್ಲಿ, ವೈವಿಧ್ಯಮಯ ಕ್ಷೇತ್ರಗಳಲ್ಲಿ ದೃಢವಾದ ಸಹಕಾರವನ್ನು ಅಭಿವೃದ್ಧಿಪಡಿಸಿದೆ ಎಂಬುದನ್ನು ಅವರು ಗಮನಿಸಿದರು. ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಭಾರತೀಯ ಮೂಲದ ರೋಮಾಂಚಕ ವಲಸಿಗ ಸಮುದಾಯ ವಹಿಸುತ್ತಿರುವ ಪಾತ್ರವನ್ನು ಅವರು ಒತ್ತಿ ಹೇಳಿದರು.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಮುಕ್ತ, ಸ್ಥಿರ, ನಿಯಮ ಆಧಾರಿತ ಹಾಗು ಸಮೃದ್ಧ ಇಂಡೋ-ಪೆಸಿಫಿಕ್ ಅನ್ನು ಉತ್ತೇಜಿಸಲು ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು.
ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆ ಮತ್ತು ಕ್ವಾಡ್ ಶೃಂಗಸಭೆ ಸೇರಿದಂತೆ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಮಂತ್ರಿ ಅಲ್ಬನೀಸ್ ಅವರನ್ನು ಪ್ರಧಾನಮಂತ್ರಿ ಆಹ್ವಾನಿಸಿದರು. ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.
*****
(Release ID: 2127271)
Visitor Counter : 16
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam