ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

प्रविष्टि तिथि: 11 MAY 2025 2:32PM by PIB Bengaluru

ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶುಭಾಶಯ ಕೋರಿದ್ದಾರೆ. ಶ್ರೀ ಮೋದಿ ಅವರು ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ ಮತ್ತು 1998ರ ಪೋಖ್ರಾನ್ ಪರೀಕ್ಷೆಗಳನ್ನು ನೆನಪಿಸಿಕೊಂಡಿದ್ದಾರೆ. ವಿಜ್ಞಾನ ಮತ್ತು ಸಂಶೋಧನೆಯ ಮೂಲಕ ಭವಿಷ್ಯದ ಪೀಳಿಗೆಯನ್ನು ಸಬಲಗೊಳಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"ರಾಷ್ಟ್ರೀಯ ತಂತ್ರಜ್ಞಾನ ದಿನದ ಶುಭಾಶಯಗಳು! ಈ ದಿನವು ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಮತ್ತು ಕೃತಜ್ಞತೆ ವ್ಯಕ್ತಪಡಿಸುವ ಮತ್ತು 1998ರ ಪೋಖ್ರಾನ್ ಪರೀಕ್ಷೆಗಳನ್ನು ನೆನಪಿಸಿಕೊಳ್ಳುವ ದಿನ. ಇವು ನಮ್ಮ ರಾಷ್ಟ್ರದ ಬೆಳವಣಿಗೆಯ ಪಥದಲ್ಲಿ, ವಿಶೇಷವಾಗಿ ಸ್ವಾವಲಂಬನೆಯತ್ತ ನಮ್ಮ ಅನ್ವೇಷಣೆಯಲ್ಲಿ ಹೆಗ್ಗುರುತಿನ ಘಟನೆಯಾಗಿದ್ದವು.

ನಮ್ಮ ಜನರಿಂದ ನಡೆಸಲ್ಪಡುತ್ತಾ ಭಾರತವು ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ (ಎಐ), ಹಸಿರು ತಂತ್ರಜ್ಞಾನ, ಡಿಜಿಟಲ್ ನಾವಿನ್ಯತೆ ಮೊದಲಾದ ತಂತ್ರಜ್ಞಾನದ ವಿವಿಧ ಆಯಾಮಗಳಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ. ವಿಜ್ಞಾನ ಮತ್ತು ಸಂಶೋಧನೆಯ ಮೂಲಕ ಭವಿಷ್ಯದ ಪೀಳಿಗೆಯನ್ನು ಸಬಲೀಕರಣಗೊಳಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ.

ತಂತ್ರಜ್ಞಾನವು ಮಾನವೀಯತೆಯನ್ನು ಔನ್ನತ್ಯಕ್ಕೆ ಕೊಂಡೊಯ್ಯಲಿ, ನಮ್ಮ ರಾಷ್ಟ್ರವನ್ನು ಸುರಕ್ಷಿತಗೊಳಿಸಲಿ ಮತ್ತು ಭವಿಷ್ಯದ ಬೆಳವಣಿಗೆಯನ್ನು ಮುನ್ನಡೆಸಲಿ.”

 

 

*****


(रिलीज़ आईडी: 2128193) आगंतुक पटल : 24
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam