ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

ಪ್ರಕಟಣಾ ದಿನಾಂಕ: 12 MAY 2025 5:46PM by PIB Bengaluru

ಛತ್ತೀಸ್‌ಗಢದ ರಾಯ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 

ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಯವರು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಪೋಸ್ಟ್ ಹೀಗಿದೆ;

“ಛತ್ತೀಸ್‌ಗಢದ ರಾಯ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ನಿಂದ ಮೃತರ ವಾರಸುದಾರರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ @narendramodi"
 

 

*****


(ಪ್ರಕಟಣೆ ಐ.ಡಿ.: 2128288) ವಿಸಿಟರ್ ಕೌಂಟರ್ : 30