ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೀನುಗಾರಿಕೆ ವಲಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

प्रविष्टि तिथि: 15 MAY 2025 7:04PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೀನುಗಾರಿಕೆ ವಲಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು. "ನಾವು ಈ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದೇವೆ ಮತ್ತು ಈ ವಲಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ನಮ್ಮ ಮೀನುಗಾರರಿಗೆ ಸಾಲ ಮತ್ತು ಮಾರುಕಟ್ಟೆ ಲಭ್ಯತೆ ಹೆಚ್ಚುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕವಾಗಿ ಕಾರ್ಯ ನಿರ್ವಹಿಸಿದ್ದೇವೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: 

"ಮೀನುಗಾರಿಕೆ ವಲಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ನಾವು ಈ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದೇವೆ ಮತ್ತು ಈ ವಲಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಸುಧಾರಿಸಲು ಹಾಗೂ ನಮ್ಮ ಮೀನುಗಾರರಿಗೆ ಸಾಲ ಮತ್ತು ಮಾರುಕಟ್ಟೆ ಲಭ್ಯತೆ ಹೆಚ್ಚಾಗುವುದನ್ನು ಖಾತರಿಪಡಿಸಿಕೊಳ್ಳಲು ವ್ಯಾಪಕವಾಗಿ ಕಾರ್ಯ ನಿರ್ವಹಿಸಿದ್ದೇವೆ. ಇಂದಿನ ಸಭೆಯಲ್ಲಿ ರಫ್ತುಗಳ ಸುಧಾರಣೆ ಮತ್ತು ಆಳ ಸಮುದ್ರ ಮೀನುಗಾರಿಕೆಗೆ ಆದ್ಯತೆ ನೀಡುವುದು ಹೇಗೆ ಎಂಬುದರ ಕುರಿತು ಚಿಂತನಶೀಲ ಚರ್ಚೆಯೂ ನಡೆಯಿತು."

 

 

*****


(रिलीज़ आईडी: 2129033) आगंतुक पटल : 14
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam