ಪ್ರಧಾನ ಮಂತ್ರಿಯವರ ಕಛೇರಿ
ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ನಾವು ಸಂಪೂರ್ಣ ಬದ್ಧ: ಪ್ರಧಾನಮಂತ್ರಿ
प्रविष्टि तिथि:
14 MAY 2025 10:09PM by PIB Bengaluru
ನಕ್ಸಲ್ ವಾದವನ್ನು ಬೇರುಸಹಿತ ತೊಡೆದುಹಾಕುವ ನಮ್ಮ ಅಭಿಯಾನ ಸರಿಯಾದ ದಿಕ್ಕಿನಲ್ಲಿ ಸಾಗಿದೆ ಎಂಬುದನ್ನು ಭದ್ರತಾ ಪಡೆಗಳ ಯಶಸ್ಸು ತೋರಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. "ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸಲು ಮತ್ತು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಆ ಪ್ರದೇಶಗಳನ್ನು ಸಂಪರ್ಕಿಸಲು ಸಂಪೂರ್ಣ ಬದ್ಧರಾಗಿದ್ದೇವೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಪೋಸ್ಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನ ಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:
"ಭದ್ರತಾ ಪಡೆಗಳ ಈ ಯಶಸ್ಸು ನಕ್ಸಲ್ ವಾದವನ್ನು ಬೇರುಸಹಿತ ತೊಡೆದು ಹಾಕುವ ನಮ್ಮ ಅಭಿಯಾನ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಮತ್ತು ಆ ಪ್ರದೇಶಗಳನ್ನು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ."
*****
(रिलीज़ आईडी: 2129063)
आगंतुक पटल : 9
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam