ಪ್ರಧಾನ ಮಂತ್ರಿಯವರ ಕಛೇರಿ
ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿ: ಪ್ರಧಾನಮಂತ್ರಿ ಸಂತಾಪ
ಪಿ ಎಂ ಎನ್ ಅರ್ ಎಫ್ ನಿಂದ ಪರಿಹಾರ ಘೋಷಣೆ
Posted On:
18 MAY 2025 12:00PM by PIB Bengaluru
ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.
ಪ್ರಧಾನಮಂತ್ರಿಯವರು, ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಪೋಸ್ಟ್ ಹೀಗಿದೆ:
“ತೆಲಂಗಾಣದ ಹೈದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ.
ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ”
@narendramodi
*****
(Release ID: 2129456)
Visitor Counter : 5
Read this release in:
Odia
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam