ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂ.ಎನ್.ಆರ್.ಎಫ್)ಯಿಂದ ಪರಿಹಾರ ಘೋಷಣೆ 

Posted On: 18 MAY 2025 9:27PM by PIB Bengaluru

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಶ್ರೀ ಮೋದಿ ಅವರು” ಶೀಘ್ರ ಗುಣಮುಖರಾಗಲಿ” ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ, ಪ್ರತಿ ಮೃತರ ಸನಿಹದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂ.ಎನ್.ಆರ್.ಎಫ್) ಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಚೇರಿಯು X ನಲ್ಲಿ ಪೋಸ್ಟ್ ಮಾಡಿದೆ;

"ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ.

ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: PM" @narendramodi

 

 

"महाराष्ट्रात सोलापूर इथे आग लागून झालेल्या दुर्घटनेतील जीवितहानीमुळे तीव्र दु:ख झाले. आपले प्रियजन गमावलेल्या कुटुंबांप्रति माझ्या सहवेदना. जखमी झालेले लवकर बरे होवोत ही प्रार्थना. पंतप्रधान राष्ट्रीय मदत निधीमधून (PMNRF) प्रत्येक मृतांच्या वारसाला 2 लाख रुपयांची मदत दिली जाईल. जखमींना 50,000 रुपये दिले जातील : पंतप्रधान" @narendramodi

 

 

*****

 


(Release ID: 2129620)