ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಧಿಕಾರ ಸ್ವೀಕರಿಸಿದ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ


ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಉಭಯ ನಾಯಕರು ಚರ್ಚಿಸಿದರು

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಉಭಯ ನಾಯಕರು ಈ ಸಂದರ್ಭದಲ್ಲಿ ಚರ್ಚಿಸಿದರು

ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಎದುರಿಸಲು ತಮ್ಮ ಪರಸ್ಪರ ಜವಾಬ್ದಾರಿಗಳ ಬದ್ಧತೆಯನ್ನು ನಾಯಕರು ಪುನರುಚ್ಚರಿಸಿದರು

ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಮಂತ್ರಿಯವರು ಆಹ್ವಾನಿಸಿದರು

Posted On: 20 MAY 2025 7:38PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ಸ್ವೀಕರಿಸಿದ ಅವರನ್ನು ಅಭಿನಂದಿಸಿದರು. 

ಕಳೆದ 25 ವರ್ಷಗಳಲ್ಲಿ ಭಾರತ-ಜರ್ಮನಿ ನಡುವಿನ ವ್ಯೂಹಾತ್ಮಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಅತ್ಯುತ್ತಮ ಪ್ರಗತಿಯನ್ನು ಗಮನಿಸಿದ ಉಭಯ ನಾಯಕರು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ ಮತ್ತು ನಾವೀನ್ಯತೆ ಮತ್ತು ತಂತ್ರಜ್ಞಾನ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಪರಸ್ಪರ ನಿಕಟವಾಗಿ ಕೆಲಸ ಮಾಡಲು ಒಪ್ಪಿಕೊಂಡರು.  ಜರ್ಮನಿಯಲ್ಲಿ ಭಾರತೀಯ ವಲಸಿಗರು ನೀಡಿದ ಸಕಾರಾತ್ಮಕ ಕೊಡುಗೆಯನ್ನು ಇಬ್ಬರೂ ನಾಯಕರು ಗಮನಿಸಿದರು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಉಭಯ ನಾಯಕರು ವಿನಿಮಯ ಮಾಡಿಕೊಂಡರು.  ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಎದುರಿಸಲು ತಮ್ಮ ಹಂಚಿಕೆಯ ಜವಾಬ್ದಾರಿಗಳ ಬದ್ಧತೆಯನ್ನು ನಾಯಕರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು. 

ಪ್ರಧಾನಮಂತ್ರಿಯವರು ಚಾನ್ಸೆಲರ್ ಮೆರ್ಜ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು. ಪರಸ್ಪರ ಸಂಪರ್ಕದಲ್ಲಿರಲು ಉಭಯ ಮುಖಂಡರು ಒಪ್ಪಿಕೊಂಡರು.

 

*****


(Release ID: 2130187)