ಪ್ರಧಾನ ಮಂತ್ರಿಯವರ ಕಛೇರಿ
ಜರ್ಮನಿಯ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
20 MAY 2025 6:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ, ಅನಂತರ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತ ಮತ್ತು ಜರ್ಮನಿ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಅವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
ಎಕ್ಸ್ ತಾಣದ ಖಾತೆಯಲ್ಲಿ ಅವರು ಈ ರೀತಿ ಬರೆದಿದ್ದಾರೆ:
"ಚಾನ್ಸೆಲರ್ @_FriedrichMerz ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅಧಿಕಾರ ವಹಿಸಿಕೊಂಡ ನಂತರ ಅವರನ್ನು ಅಭಿನಂದಿಸಿದ್ದೇನೆ. ಭಾರತ ಮತ್ತು ಜರ್ಮನಿ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸಿದ್ದೇವೆ. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ನಾವು ಪರಸ್ಪರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ."
*****
(Release ID: 2130208)
Visitor Counter : 6
Read this release in:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam