ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಎನ್.ಟಿ.ರಾಮರಾವ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
Posted On:
28 MAY 2025 9:41AM by PIB Bengaluru
ಶ್ರೀ ಎನ್.ಟಿ.ರಾಮರಾವ್ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ನಮನ ಸಲ್ಲಿಸಿದರು. "ಸಮಾಜಕ್ಕೆ ಸೇವೆಗಾಗಿ ಮತ್ತು ಬಡವರು ಹಾಗೂ ದೀನದಲಿತರ ಸಬಲೀಕರಣಕ್ಕಾಗಿ ಮಾಡಿರುವ ಪ್ರಯತ್ನಗಳಿಗಾಗಿ ಅವರು ಇಂದೂ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ಎನ್.ಟಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗಾಗಿ ಅವರು ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ. ಅವರ ಸಿನಿಮೀಯ ಕೃತಿಗಳು ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇವೆ. ನಾವೆಲ್ಲರೂ ಅವರಿಂದ ಆಳವಾಗಿ ಪ್ರೇರಿತರಾಗಿದ್ದೇವೆ.
ನನ್ನ ಸ್ನೇಹಿತ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶದ ಎನ್.ಡಿ.ಎ. ಸರ್ಕಾರವು ಎನ್.ಟಿ.ಆರ್ .ಅವರ ದೃಷ್ಟಿಕೋನವನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ."
@ncbn
*****
(Release ID: 2131944)
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam