ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
04 JUN 2025 4:55PM by PIB Bengaluru
ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.
ಪ್ರಧಾನಮಂತ್ರಿಯವರು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರ ಪ್ರಕಟಿಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿಯ ಎಕ್ಸ್ ಪೋಸ್ಟ್ ಹೀಗಿದೆ:
"ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.
ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2133862)
ವಿಸಿಟರ್ ಕೌಂಟರ್ : 26
ಪ್ರಕಟಣೆಯನ್ನು ಇದರಲ್ಲಿ ಓದಿ:
Punjabi
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Gujarati
,
Odia
,
Tamil
,
Telugu
,
Malayalam