ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಎರಡು ಸ್ಥಳಗಳು ರಾಮ್‌ಸರ್ ತಾಣಗಳ ಪಟ್ಟಿಗೆ ಸೇರ್ಪಡೆಗೆ ಪ್ರಧಾನಮಂತ್ರಿ ಶ್ಲಾಘನೆ
प्रविष्टि तिथि:
04 JUN 2025 10:28PM by PIB Bengaluru
ಪರಿಸರ ಸಂರಕ್ಷಣೆಯಲ್ಲಿ ಭಾರತದ ನಿರಂತರ ಪ್ರಗತಿಯ ಪರಿಣಾಮವಾಗಿ ರಾಜಸ್ಥಾನದ ಫಲೋಡಿಯಲ್ಲಿರುವ ಖಿಚನ್ ಮತ್ತು ಉದಯಪುರದಲ್ಲಿರುವ ಮೆನಾರ್ ಎಂಬ ಎರಡು ಜೌಗು ಪ್ರದೇಶಗಳು ಪ್ರತಿಷ್ಠಿತ ರಾಮ್‌ಸರ್ ತಾಣಗಳ ಪಟ್ಟಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸೇರ್ಪಡೆಯೊಂದಿಗೆ, ಭಾರತ ಈಗ ಒಟ್ಟು 91 ರಾಮ್‌ಸರ್ ತಾಣಗಳನ್ನು ಹೊಂದಿದೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಪ್ರಕಟಿಸಿದ್ದಾರೆ. ಇದು ಪರಿಸರ ಸಂರಕ್ಷಣೆಗೆ ಪ್ರಧಾನಮಂತ್ರಿ ಮೋದಿಯವರ ಆದ್ಯತೆಗೆ ಸಾಕ್ಷಿಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ಈ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿ ಮೋದಿ ಅವರು ಹೀಗೆ ಹೇಳಿದ್ದಾರೆ:
"ಶುಭ ಸುದ್ದಿ! ಅತ್ಯಂತ ಹುರುಪು ಮತ್ತು ಸಾರ್ವಜನಿಕ ಪಾಲ್ಗೊಳ್ಳುವಿಕೆಯೊಂದಿಗೆ ಪರಿಸರ ಸಂರಕ್ಷಣೆಯಲ್ಲಿ ಭಾರತದ ದಾಪುಗಾಲುಗಳನ್ನಿರಿಸಿದೆ."
*****
(रिलीज़ आईडी: 2134103)
आगंतुक पटल : 20
इस विज्ञप्ति को इन भाषाओं में पढ़ें:
Malayalam
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Telugu