ಪ್ರಧಾನ ಮಂತ್ರಿಯವರ ಕಛೇರಿ
ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ
प्रविष्टि तिथि:
12 JUN 2025 4:15PM by PIB Bengaluru
ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತರಿಗೆ ತ್ವರಿತ ಮತ್ತು ಪರಿಣಾಮಕಾರಿ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ಈ ಕುರಿತು ಪೋಸ್ಟ್ ಮಾಡಿದ್ದಾರೆ:
"ಅಹಮದಾಬಾದ್ ನಲ್ಲಿ ನಡೆದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿತರನ್ನಾಗಿ ಮಾಡಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರಿಗೂ ನನ್ನ ಸಾಂತ್ವನಗಳು. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ."
*****
(रिलीज़ आईडी: 2135962)
आगंतुक पटल : 9
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam