ಪ್ರಧಾನ ಮಂತ್ರಿಯವರ ಕಛೇರಿ
ಇಸ್ರೇಲ್ ಪ್ರಧಾನಮಂತ್ರಿಯಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
ಇಸ್ರೇಲ್ ಮತ್ತು ಇರಾನ್ ನಡುವೆ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿಗೆ ವಿವರಿಸಿದ ಪ್ರಧಾನಮಂತ್ರಿ ನೆತನ್ಯಾಹು
ಪ್ರಧಾನಮಂತ್ರಿ ಅವರು ಭಾರತದ ಕಾಳಜಿಯನ್ನು ಹಂಚಿಕೊಂಡರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದರು
प्रविष्टि तिथि:
13 JUN 2025 11:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳು ಮತ್ತು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನೆತನ್ಯಾಹು ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾರತದ ಕಾಳಜಿಯನ್ನು ಹಂಚಿಕೊಂಡರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಬಳಿಕ ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.
*****
(रिलीज़ आईडी: 2136418)
आगंतुक पटल : 12
इस विज्ञप्ति को इन भाषाओं में पढ़ें:
Tamil
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam