ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಅಹಮದಾಬಾದ್ ವಿಮಾನ ಅಪಘಾತದ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಪರಿಶೀಲನೆ ನಡೆಸಿದರು
ಡಾ.ಪಿ.ಕೆ.ಮಿಶ್ರಾ ಸಿವಿಲ್ ಆಸ್ಪತ್ರೆಯಲ್ಲಿ ಸಂತ್ರಸ್ತರು ಮತ್ತು ಕುಟುಂಬಗಳನ್ನು ಭೇಟಿಯಾದರು
ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಡಾ.ಪಿ.ಕೆ.ಮಿಶ್ರಾ ನಿರ್ದೇಶನ
Posted On:
15 JUN 2025 8:09PM by PIB Bengaluru
ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇತ್ತೀಚೆಗೆ ಸಂಭವಿಸಿದ ವಿಮಾನ ಅಪಘಾತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಅಹಮದಾಬಾದ್ ಗೆ ಭೇಟಿ ನೀಡಿದರು. ಅವರ ಭೇಟಿಯು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತ್ವರಿತ ಪರಿಹಾರ, ಸಮಗ್ರ ತನಿಖೆ ಮತ್ತು ಸಮಗ್ರ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿರ್ದೇಶನವನ್ನು ಬಲಪಡಿಸಿತು.
ಶ್ರೀ ಮಿಶ್ರಾ ಅವರು ಮೇಘನಿ ನಗರದ ಬಿ.ಜೆ.ವೈದ್ಯಕೀಯ ಕಾಲೇಜು ಬಳಿಯ ಅಪಘಾತದ ಸ್ಥಳವನ್ನು ಪರಿಶೀಲಿಸಿದರು, ಅಲ್ಲಿ ರಾಜ್ಯ ಸರ್ಕಾರ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಘಟನೆಗಳ ಅನುಕ್ರಮ ಮತ್ತು ತಕ್ಷಣದ ಪ್ರತಿಕ್ರಿಯೆ ಕ್ರಮಗಳ ಬಗ್ಗೆ ವಿವರಿಸಿದರು.
ಅಹಮದಾಬಾದ್ ನ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಡಾ.ಮಿಶ್ರಾ ಅವರು ದುಃಖಿತ ಕುಟುಂಬಗಳನ್ನು ಭೇಟಿಯಾದರು, ಡಿಎನ್ಎ ಮಾದರಿ ಹೊಂದಾಣಿಕೆಯನ್ನು ಗಮನಿಸಿದರು ಮತ್ತು ತಡೆರಹಿತ ಹಾಗೂ ಸಹಾನುಭೂತಿ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗಾಯಗೊಂಡ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ ಅವರು, ಅವರ ವೈದ್ಯಕೀಯ ಚಿಕಿತ್ಸೆ ಮತ್ತು ಚೇತರಿಕೆಗೆ ಆದ್ಯತೆ ನೀಡುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ಡಾ.ಮಿಶ್ರಾ ಅವರು ಡಿಎನ್ಎ ಮಾದರಿ ಪ್ರಯತ್ನಗಳನ್ನು ಪರಿಶೀಲಿಸಿದರು ಮತ್ತು ವೈಜ್ಞಾನಿಕ ನಿಖರತೆಯನ್ನು ಕಾಪಾಡಿಕೊಳ್ಳುವಾಗ ಗುರುತಿಸುವಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಅಹಮದಾಬಾದ್ ನ ಸರ್ಕಿಟ್ ಹೌಸ್ ನಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ.ಮಿಶ್ರಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎಎಐಬಿ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಯುತ್ತಿರುವ ಪರಿಹಾರ, ರಕ್ಷಣಾ ಮತ್ತು ತನಿಖಾ ಪ್ರಯತ್ನಗಳ ಬಗ್ಗೆ ಚರ್ಚಿಸಿದರು. ವಿಮಾನವು ಅಮೆರಿಕ ನಿರ್ಮಿತವಾಗಿರುವುದರಿಂದ ಅಮೆರಿಕ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (ಎನ್ ಟಿ ಎಸ್ ಬಿ) ಅಂತಾರಾಷ್ಟ್ರೀಯ ಪ್ರೋಟೋಕಾಲ್ ಗಳ ಅಡಿಯಲ್ಲಿ ಸಮಾನಾಂತರ ತನಿಖೆ ನಡೆಸುತ್ತಿದೆ. ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ ಡಿ ಆರ್) ಮತ್ತು ಕಾಕ್ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಅನ್ನು ಪತ್ತೆಹಚ್ಚಲಾಗಿದೆ ಮತ್ತು ಭದ್ರಪಡಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಡಾ. ಮಿಶ್ರಾ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುವ ಮತ್ತು ಭಾಗಿಯಾಗಿರುವ ಎಲ್ಲಾ ಏಜೆನ್ಸಿಗಳಲ್ಲಿ ಸಂಘಟಿತ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಪುನರುಚ್ಚರಿಸಿದರು. ಪ್ರಧಾನ ಕಾರ್ಯದರ್ಶಿಯವರೊಂದಿಗೆ ಪ್ರಧಾನಮಂತ್ರಿ ಕಾರ್ಯಾಲಯದ ಸಲಹೆಗಾರರಾದ ಶ್ರೀ ತರುಣ್ ಕಪೂರ್ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದ ಉಪ ಕಾರ್ಯದರ್ಶಿ ಶ್ರೀ ಮಂಗೇಶ್ ಘಿಲ್ಡಿಯಾಲ್ ಇದ್ದರು.
*****
(Release ID: 2136633)
Read this release in:
Malayalam
,
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu